ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 4 ಲಕ್ಷ ಸಕ್ರಿಯ ಪ್ರಕರಣ

Last Updated 6 ಡಿಸೆಂಬರ್ 2020, 6:48 IST
ಅಕ್ಷರ ಗಾತ್ರ

ನವದೆಹಲಿ:ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 36,011 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 482 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕು ತಗುಲಿದವರ ಒಟ್ಟು ಸಂಖ್ಯೆ 96,44,222 ತಲುಪಿದೆ. 1,40,182 ಮಂದಿ ಈವರೆಗೆ ಸಾವಿಗೀಡಾಗಿದ್ದಾರೆ. ಸದ್ಯ 4,03,248 ಸಕ್ರಿಯ ಪ್ರಕರಣಗಳಿವೆ.

ಸತತ 28ನೇ ದಿನ ಪ್ರಕರಣಗಳಲ್ಲಿ ಇಳಿಕೆ: ದೇಶದಲ್ಲಿ ಪ್ರತಿ ದಿನ ಹೊಸ ಕೋವಿಡ್ ಪ್ರಕರಣಗಳು 50 ಸಾವಿರಕ್ಕಿಂತಲೂ ಕಡಿಮೆ ವರದಿಯಾಗುತ್ತಿರುವುದು ಇದು 28ನೇ ದಿನವಾಗಿದೆ. ಈ ಹಿಂದೆ ನವೆಂಬರ್ 7ರಂದು ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿತ್ತು.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಸಕ್ರಿಯ ಪ್ರಕರಣಗಳು (83,931) ಇವೆ. ದೆಹಲಿಯಲ್ಲಿಯೂ ಪರಿಸ್ಥಿತಿ ಸುಧಾರಿಸಲು ಆರಂಭವಾಗಿದ್ದು, ಸದ್ಯ 26,678 ಸಕ್ರಿಯ ಪ್ರಕರಣಗಳಿವೆ. ಭಾನುವಾರ ಅಲ್ಲಿ 9,574 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ ಡಿಸೆಂಬರ್ 05ರ ವರೆಗೆ 14.69 ಕೋಟಿಗೂ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಶನಿವಾರ ಒಂದೇ ದಿನ 11,01,063 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT