ಬುಧವಾರ, ನವೆಂಬರ್ 25, 2020
18 °C

Covid-19 India Update: ದೇಶದಲ್ಲಿ ಒಟ್ಟು 78 ಲಕ್ಷಕ್ಕೂ ಹೆಚ್ಚು ಪ್ರಕರಣಗಳು

ಎಎನ್‌ಐ‌ Updated:

ಅಕ್ಷರ ಗಾತ್ರ : | |

Coronavirus

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 8,511 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 95,657ಕ್ಕೆ ಏರಿಕೆಯಾಗಿದೆ. ಈವರೆಗೂ ಸೋಂಕಿನಿಂದ 1,281 ಮಂದಿ ಸಾವಿಗೀಡಾಗಿದ್ದಾರೆ.

ತಮಿಳುನಾಡಿನಲ್ಲಿ 3,057 ಹೊಸ ಪ್ರಕರಣಗಳು, ದೆಹಲಿಯಲ್ಲಿ 4,086 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 4,143 ಪ್ರಕರಣಗಳು ದಾಖಲಾಗಿವೆ. ಶುಕ್ರವಾರ ರಾತ್ರಿ ವರೆಗೂ ದೇಶದ ಪಟ್ಟು ಪ್ರಕರಣಗಳ ಸಂಖ್ಯೆ 78 ಲಕ್ಷ ದಾಟಿದೆ.

ಶುಕ್ರವಾರ ಬೆಳಗ್ಗಿನ ವರೆಗೂ ದೇಶದಲ್ಲಿ 24 ಗಂಟೆ ಅವಧಿಯಲ್ಲಿ 54,366 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 690 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 77,61,312ಕ್ಕೆ ಏರಿಕೆಯಾಗಿದೆ. ಈವರೆಗೆ 69,48,497 ಸೋಂಕಿತರು ಗುಣಮುಖರಾಗಿದ್ದು, 1,17,306 ಮಂದಿ ಮೃತಪಟ್ಟಿದ್ದಾರೆ. ಸದ್ಯ 6,95,509 ಸಕ್ರಿಯ ಪ್ರಕರಣಗಳಿವೆ.

1,59,346 ಸಕ್ರಿಯ ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಅತಿಹೆಚ್ಚು ಸೋಂಕುಪೀಡಿತರಿರುವ ರಾಜ್ಯವಾಗಿದೆ. ಅಲ್ಲಿ 14,15,679 ಮಂದಿ ಈವರೆಗೆ ಗುಣಮುಖರಾಗಿದ್ದು, 42,633 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಈವರೆಗೆ 10 ಕೋಟಿಗೂ ಹೆಚ್ಚು ಕೊರೊನಾ ಪತ್ತೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ಅಕ್ಟೋಬರ್ 22ರ ವರೆಗೆ 10.01 ಕೋಟಿಗೂ ಹೆಚ್ಚು ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಗುರುವಾರ 14,42,722 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು