ಗುರುವಾರ , ಮಾರ್ಚ್ 30, 2023
31 °C

Covid-19 India Update: 260 ದಿನಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 10,853 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 526 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 12,432 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಸದ್ಯ ದೇಶದಲ್ಲಿ 1,44,845 ಸಕ್ರಿಯ ಪ್ರಕರಣಗಳಿದ್ದು, ಇದು 260 ದಿನಗಳಲ್ಲೇ ಅತಿ ಕಡಿಮೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ.

ದೇಶದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 34,355,536 ತಲುಪಿದೆ. ಸಾವಿನ ಸಂಖ್ಯೆ 4,60,791ಕ್ಕೆ ಏರಿಕೆಯಾಗಿದೆ.

ಓದಿ: 

ಈವರೆಗೆ 108 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಈ ಮಧ್ಯೆ, ಕೋವಿಡ್ ಪ್ರಸರಣದ ವೇಗವನ್ನು ತಿಳಿಸುವ ‘ಆರ್ ವ್ಯಾಲ್ಯೂ’ ಪ್ರಮಾಣ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಮ್ಮೆ ಆತಂಕ ಮೂಡಿಸುವ ರೀತಿಯಲ್ಲಿ ಕೊಂಚ ಏರಿಕೆ ಕಂಡಿದೆ. ಬೆಂಗಳೂರು ಸೇರಿದಂತೆ ಕೆಲವು ಮೆಟ್ರೊ ನಗರಗಳಲ್ಲೂ ಆರ್ ವ್ಯಾಲ್ಯೂ ಮಿತಿ ದಾಟುತ್ತಿದೆ ಎಂದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು