ಶನಿವಾರ, ಸೆಪ್ಟೆಂಬರ್ 25, 2021
24 °C

Covid-19 India Update: ಸತತ ಮೂರನೇ ದಿನ 40 ಸಾವಿರಕ್ಕಿಂತ ಕಡಿಮೆ ಪ್ರಕರಣ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 35,499 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 447 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ಸತತ ಮೂರು ದಿನಗಳಿಂದ ದೈನಂದಿನ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಕಡಿಮೆ ವರದಿಯಾಗಿದೆ. ಹೊಸ ಪ್ರಕರಣಗಳ ಪ್ರಮಾಣದಲ್ಲಿ ಶೇ 9ರಷ್ಟು ಇಳಿಕೆಯಾಗಿದೆ.

ಓದಿ: 

ದೇಶದಲ್ಲಿ ಈವರೆಗೆ 3,19,69,954 ಮಂದಿ ಸೋಂಕಿತರಾಗಿದ್ದು, 4,28,309 ಜನ ಮೃತಪಟ್ಟಿದ್ದಾರೆ. 3,11,39,457 ಸೊಂಕಿತರು ಗುಣಮುಖರಾಗಿದ್ದಾರೆ.

ಸದ್ಯ 4,02,188 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಶೇ 1.26ರಷ್ಟಾಗಿದೆ. ಚೇತರಿಕೆ ಪ್ರಮಾಣ ಶೇ 97.40ಗೆ ಏರಿಕೆಯಾಗಿದೆ.

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.59ರಷ್ಟಿದ್ದು, ವಾರದ ಪಾಸಿಟಿವಿಟಿ ಪ್ರಮಾಣ ಶೇ 2.35ರಷ್ಟಿದೆ.

ದೇಶದಾದ್ಯಂತ ಈವರೆಗೆ 50.86 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು