Covid-19 India Update: ದೇಶದಲ್ಲಿ ಒಂದೇ ದಿನ 15,388 ಪ್ರಕರಣ, 77 ಸಾವು

ನವದೆಹಲಿ: ದೇಶದಾದ್ಯಂತ ಒಂದೇ ದಿನ 15,388 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಸೋಂಕು ತಗುಲಿದವರ ಸಂಖ್ಯೆ 1,12,44,786 ತಲುಪಿದೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ತುಸು ಇಳಿಕೆಯಾಗಿದೆ. ಸದ್ಯ 1,87,462 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಹೇಳಿದೆ.
ಓದಿ: ಲಸಿಕೆ ನೀತಿ, ಕೋವಿಡ್ ವಿರುದ್ಧ ಹೋರಾಟದಲ್ಲಿ ಭಾರತ ಮುಂಚೂಣಿಯಲ್ಲಿ: ಗೀತಾ ಗೋಪಿನಾಥ್
24 ಗಂಟೆ ಅವಧಿಯಲ್ಲಿ 77 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 1,57,930ಕ್ಕೆ ಏರಿಕೆಯಾಗಿದೆ.
ಸೋಮವಾರ 7.4 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಒಟ್ಟು ಈವರೆಗೆ 22 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಓದಿ: ಅಮೆರಿದಲ್ಲಿ ಪೂರ್ಣ ಲಸಿಕೆ ಪಡೆದವರು ಮಾಸ್ಕ್ ಇಲ್ಲದೇ ಸಣ್ಣದಾಗಿ ಗುಂಪುಸೇರಬಹುದು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.