ಭಾನುವಾರ, ಜುಲೈ 25, 2021
22 °C

Covid-19 India Update: ಸತತ ಆರನೇ ದಿನ 50 ಸಾವಿರಕ್ಕಿಂತ ಕಡಿಮೆ ಪ್ರಕರಣ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 44,111 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 738 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

50 ಸಾವಿರಕ್ಕಿಂತ ಕಡಿಮೆ ಪ್ರಕರಣ ವರದಿಯಾಗುತ್ತಿರುವುದು ಇದು ಸತತ ಆರನೇ ದಿನವಾಗಿದೆ.

ಓದಿ: ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ದೇಶದಲ್ಲಿ ಈವರೆಗೆ 4,01,050 ಸಾವು ಸಂಭವಿಸಿದೆ. ಇದರೊಂದಿಗೆ ಅತಿಹೆಚ್ಚು ಸಾವು ಸಂಭವಿಸಿದ ದೇಶಗಳ ಪಟ್ಟಿಯಲ್ಲಿ ಅಮೆರಿಕ, ಬ್ರೆಜಿಲ್‌ ನಂತರದ ಸ್ಥಾನದಲ್ಲಿ ಭಾರತ ಇದೆ.

ಈವರೆಗೆ 3,05,02,362 ಮಂದಿ ಸೋಂಕಿತರಾಗಿದ್ದು, 2,96,05,779 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, 4,95,533ಕ್ಕೆ ತಲುಪಿದೆ.

ಓದಿ: 

ದೇಶದಾದ್ಯಂತ ಒಟ್ಟು 34,46,11,291 ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು