ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 27,176 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 284 ಸೋಂಕಿತರು ಮೃತಪಟ್ಟಿದ್ದಾರೆ. 38,012 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 3,51,087 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು3,33,16,755 ಮಂದಿ ಸೋಂಕಿತರಾಗಿದ್ದಾರೆ. ಒಟ್ಟು3,25,22,171 ಮಂದಿ ಚೇತರಿಸಿಕೊಂಡಿದ್ದು,4,43,497 ಸೋಂಕಿತರು ಸಾವಿಗೀಡಾಗಿದ್ದಾರೆ.ಚೇತರಿಕೆ ಪ್ರಮಾಣ ಶೇ 97.62ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 2ರಷ್ಟಿದೆ.
ಈವರೆಗೆ 75.89 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ,ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನರಿಗೆ ಕೋವಿಡ್–19 ಲಸಿಕೆ ನೀಡಿದ ರಾಷ್ಟ್ರವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.