ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಹೊಸ ಪ್ರಕರಣಗಳಲ್ಲಿ ಇಳಿಕೆ, ಚೇತರಿಕೆ ಪ್ರಮಾಣ ಹೆಚ್ಚಳ

Last Updated 28 ಜೂನ್ 2021, 4:35 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 46,148 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 979 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗೆ ಒಟ್ಟು 3,02,79,331 ಮಂದಿಗೆ ಸೋಂಕು ತಗುಲಿದ್ದು, 3,96,730 ಸೋಂಕಿತರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, 5,72,994 ಆಗಿದೆ. ಇದು ಒಟ್ಟು ಪ್ರಕರಣಗಳ ಶೇ 1.89ರಷ್ಟಾಗಿದೆ.

ಕಳೆದ 46 ದಿನಗಳಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ದೈನಂದಿನ ಹೊಸ ಪ್ರಕರಣಗಳಿಗಿಂತಲೂ ಹೆಚ್ಚಿದೆ. ಕಳೆದ 24 ಗಂಟೆ ಅವಧಿಯಲ್ಲಿ 58,578 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು, 2,93,09,607 ಮಂದಿ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ 96.80ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT