ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಇಳಿಕೆ

11 ದಿಗಳಿಂದ ಶೇ 5ಕ್ಕಿಂತ ಕಡಿಮೆ ದಾಖಲಾದ ಪಾಸಿಟಿವಿಟಿ ದರ
Last Updated 18 ಜೂನ್ 2021, 5:42 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದ್ದು, ಕಳೆದ ಹನ್ನೊಂದು ದಿನಗಳಿಂದ ಪಾಸಿಟಿವಿಟಿ ದರ ನಿರಂತರವಾಗಿ ಶೇ 5ಕ್ಕಿಂತ ಕಡಿಮೆ ದಾಖಲಾಗಿದೆ. ಪ್ರಸ್ತುತ ಪಾಸಿಟಿವಿಟಿ ರೇಟ್‌ ಶೇ 3.24ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಶುಕ್ರವಾರ ಬೆಳಿಗ್ಗೆ 8 ಗಂಟೆಯವರೆಗಿನ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಒಟ್ಟು 62,480 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದು ಕಳೆದ 61 ದಿನಗಳಲ್ಲಿ ದಾಖಲಾದ ಅತಿ ಕಡಿಮೆ ಕೊರೊನಾ ಸೋಂಕಿನ ಪ್ರಕರಣಗಳಾಗಿವೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟು ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 2,97, 62,793. ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 1587. ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ 3,83,490.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,98,656ಕ್ಕೆ ಇಳಿದಿದೆ. ಇದೇ ರೀತಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗುವವರ ಪ್ರಮಾಣ ಶೇ 96.03ಕ್ಕೆ ಏರಿದೆ.

ದೇಶದಲ್ಲಿ ಇಲ್ಲಿವರೆಗೆ 38,71,67,696 ಜನರಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿದೆ. ಗುರುವಾರ ಒಂದೇ ದಿನ 19,29,476 ಜನರಿಗೆ ಕೊರೊನಾ ಸೋಂಕು ಪರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT