ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಕೋವಿಡ್‌ ಪ್ರಕರಣ ಮತ್ತೆ ಏರಿಕೆ, 43,654 ಮಂದಿಗೆ ಸೋಂಕು

Last Updated 28 ಜುಲೈ 2021, 4:33 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 43,654 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 640 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಒಂದೇ ದಿನ 41,678 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್‌ನಿಂದಾಗಿ ದೇಶದಲ್ಲಿ ಈವರೆಗೆ ಒಟ್ಟು 4,22,022 ಮಂದಿ ಮೃತಪಟ್ಟಿದ್ದಾರೆ. ಸದ್ಯ 3,99,436 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 44,61,56,659 ಡೋಸ್ ಲಸಿಕೆ ನೀಡಲಾಗಿದೆ.

ಮಂಗಳವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 29,689 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. 132 ದಿನಗಳ ಬಳಿಕ ಮೊದಲ ಬಾರಿಗೆ ದೈನಂದಿನ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆಯಾಗಿತ್ತು. ಆದರೆ, ಇಂದು ಮತ್ತೆ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT