ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 13,742 ಮಂದಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ. 104 ಮಂದಿ ಮೃತಪಟ್ಟಿದ್ದು, 14,037 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 1,10,30,176 ಆಗಿದೆ. ಈ ಪೈಕಿ 1,56,567 ಮಂದಿ ಮೃತಪಟ್ಟಿದ್ದು, 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ.

ಓದಿ:ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳಕ್ಕೆ ರೂಪಾಂತರ ವೈರಸ್ ಕಾರಣವೇ?

ಸದ್ಯ ದೇಶದಲ್ಲಿ 1,46,907 ಸಕ್ರಿಯ ಪ್ರಕರಣಗಳಿವೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ.

ಈವರೆಗೆ ಒಟ್ಟು 1,21,65,598 ಮಂದಿಗೆ ಕೋವಿಡ್–19 ವಿರುದ್ಧ ಲಸಿಕೆ ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಕಾರ್ಯಕ್ರಮ ದೇಶದೆಲ್ಲೆಡೆ ಚಾಲ್ತಿಯಲ್ಲಿದೆ. ಶೀಘ್ರದಲ್ಲೇ 50 ವರ್ಷಕ್ಕಿಂತ ಹೆಚ್ಚು ವಯಸ್ಸಾದವರಿಗೂ ಲಸಿಕೆ ನೀಡಿಕೆ ಆರಂಭವಾಗುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.