ಮಂಗಳವಾರ, ಅಕ್ಟೋಬರ್ 20, 2020
22 °C

Covid-19 India Update: ಕೇರಳದಲ್ಲಿ 96 ಸಾವಿರ ಸಕ್ರಿಯ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ನವದೆಹಲಿ: ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 7,631 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 96 ಸಾವಿರ ದಾಟಿದೆ.

ದೆಹಲಿಯಲ್ಲಿ 3,299 ಪ್ರಕರಣಗಳು, ತಮಿಳುನಾಡಿನಲ್ಲಿ 3,299 ಪ್ರಕರಣಗಳು, ಕರ್ನಾಟಕದಲ್ಲಿ 7,012 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 3,986 ಪ್ರಕರಣಗಳು ಹಾಗೂ ಬಿಹಾರದಲ್ಲಿ 1,152 ಪ್ರಕರಣಗಳು ದಾಖಲಾಗಿವೆ. ಪುದುಚೇರಿ, ಮಿಜೊರಾಂನಲ್ಲಿ 24 ಗಂಟೆಗಳಲ್ಲಿ ಯಾವುದೇ ಹೊಸ ಪ್ರಕರಣ ದಾಖಲಾಗಿಲ್ಲ.

ಭಾನುವಾರ ಬೆಳಗ್ಗಿನವರೆಗೂ ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 61,871 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 1,033 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಹಿಂದಿನ ದಿನಕ್ಕಿಂತ 1,798 ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ 65,97,210 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ. 1,14,031 ಮಂದಿ ಅಸುನೀಗಿದ್ದಾರೆ.

 

ಅತಿಹೆಚ್ಚು ಮಂದಿಗೆ ಸೋಂಕು ತಗುಲಿರುವ ರಾಜ್ಯವಾದ ಮಹಾರಾಷ್ಟ್ರದಲ್ಲಿ ಈಗ 1,85,750 ಸಕ್ರಿಯ ಪ್ರಕರಣಗಳಿವೆ. ಈವರೆಗೆ 13,58,606 ಸೋಂಕಿತರು ಚೇತರಿಸಿಕೊಂಡಿದ್ದಾರೆ. 41,965 ಮಂದಿ ಮೃತಪಟ್ಟಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು