ಶನಿವಾರ, ಆಗಸ್ಟ್ 20, 2022
21 °C

Covid-19 India Update: ಸೋಂಕಿತರ ಚೇತರಿಕೆ ಪ್ರಮಾಣ ಶೇ. 77.23ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕೋವಿಡ್–19 ಸೋಂಕಿತರ ಚೇತರಿಕೆ ಪ್ರಮಾಣವು ಶೇ.77.23ಕ್ಕೆ ಏರಿಯಾಗಿದ್ದು, ಸಾವಿನ ಪ್ರಮಾಣ ಶೇ.1.73 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 86,432 ಹೊಸ ಪ್ರಕರಣಗಳು ವರದಿಯಾಗಿದ್ದು, 1,089 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40,23,179ಕ್ಕೆ ತಲುಪಿದೆ. ಸಾವಿನ ಸಂಖ್ಯೆ 69,561ಕ್ಕೆ ಏರಿಕೆಯಾಗಿದೆ. 31,07,223 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 8,46,395 ಪ್ರಕರಣಗಳು ಸಕ್ರಿಯವಾಗಿವೆ.

ಮಹಾರಾಷ್ಟ್ರವೊಂದರಲ್ಲೇ 8,63,062 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 6,25,773 ಸೋಂಕಿತರು ಗುಣಮುಖರಾಗಿದ್ದು, 2,11,325 ಪ್ರಕರಣಗಳು ಸಕ್ರಿಯವಾಗಿವೆ. 25,964 ಮಂದಿ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಈವರೆಗೂ 4,76,506 ಜನರಿಗೆ ಸೋಂಕು ತಗುಲಿದೆ. 1,02,067 ಸಕ್ರಿಯ ಪ್ರಕರಣಗಳೊಂದಿಗೆ 3,70,163 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 4,276 ಜನರು ಸಾವಿಗೀಡಾಗಿದ್ದಾರೆ.

ತಮಿಳುನಾಡಿನಲ್ಲಿ ಈವರೆಗೂ 4,51,827 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 3,92,507 ಮಂದಿ ಗುಣಮುಖರಾಗಿದ್ದಾರೆ. 51,633 ಸಕ್ರಿಯ ಪ್ರಕರಣಗಳಿದ್ದು, 7,687 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ. 

ಕರ್ನಾಟಕದಲ್ಲಿ ಒಟ್ಟಾರೆ 3,79,486 ಜನರಿಗೆ ಸೋಂಕು ತಗುಲಿದ್ದು, 6,170 ಜನರು ಸಾವಿಗೀಡಾಗಿದ್ದಾರೆ. 99,120 ಸಕ್ರಿಯ ಪ್ರಕರಣಗಳಿದ್ದು, 2,74,196 ಜನರು ಗುಣಮುಖರಾಗಿದ್ದಾರೆ. 

10.59 ಲಕ್ಷ ಜನರ ಮಾದರಿ ಪರೀಕ್ಷೆ
ಸೆಪ್ಟೆಂಬರ್‌ 4ರಂದು ಒಂದೇದಿನ ಒಟ್ಟು 10,59,346 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ (ಐಸಿಎಂಆರ್‌) ತಿಳಿಸಿದೆ. ಮಾತ್ರವಲ್ಲದೆ ಇದುವರೆಗೆ ಒಟ್ಟು 4,77,38,491 ಜನರಿಗೆ ಪರೀಕ್ಷೆ ನಡೆಸಲಾಗಿದೆ ಎಂದೂ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು