ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Updates: ಹೊಸ ಪ್ರಕರಣಗಳ ಸಂಖ್ಯೆ ಭಾರಿ ಏರಿಕೆ, 220 ಸಾವು

Last Updated 1 ಜನವರಿ 2022, 5:55 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 22,775 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 8,949 ಮಂದಿ ಚೇತರಿಸಿಕೊಂಡಿದ್ದು, 220 ಮಂದಿ ಸೋಂಕಿತರು ಅಸುನೀಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,04,781ಕ್ಕೆ ಏರಿದ್ದು, ಒಂದೇ ದಿನ 13,420 ಪ್ರಕರಣಗಳು ಹೆಚ್ಚಳವಾಗಿವೆ. ಕೋವಿಡ್ ಚೇತರಿಕೆ ಪ್ರಮಾಣ ಶೇಕಡ 98.32ರಷ್ಟಿದೆ.

ಒಂದೇ ದಿನ ಓಮೈಕ್ರಾನ್‌ನ 161 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 1,431ಕ್ಕೆ ಜಿಗಿದಿದೆ.

ಮಹಾರಾಷ್ಟ್ರದಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಅತ್ಯಧಿಕವಾಗಿದ್ದು, 454ಕ್ಕೆ ಏರಿದೆ. ದೆಹಲಿಯಲ್ಲಿ 351, ಕೇರಳದಲ್ಲಿ 118 ಮತ್ತು ಗುಜರಾತ್‌ನಲ್ಲಿ 115 ಪ್ರಕರಣಗಳಿವೆ.

ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 3,48,61,579 ರಷ್ಟಾಗಿದ್ದು, ಮೃತರ ಒಟ್ಟು ಸಂಖ್ಯೆ 4,81,080ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT