ಗುರುವಾರ , ಮೇ 26, 2022
28 °C

Covid-19 India Update: ದೈನಂದಿನ ಸಂಖ್ಯೆಯಲ್ಲಿ ಇಳಿಕೆ, 2.55 ಲಕ್ಷ ಹೊಸ ಪ್ರಕರಣ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. 24 ಗಂಟೆಗಳ ಅವಧಿಯಲ್ಲಿ 2,55,874 ಪ್ರಕರಣಗಳು ದಾಖಲಾಗಿದ್ದು, 614 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಕೋವಿಡ್ ದೃಢಪಟ್ಟ ದೈನಂದಿನ ಪ್ರಕರಣಗಳ ಸಂಖ್ಯೆಗಳಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಶನಿವಾರ 3.37 ಲಕ್ಷ, ಭಾನುವಾರ 3.33 ಲಕ್ಷ ಮತ್ತು ಸೋಮವಾರ 3.06 ಲಕ್ಷ ಪ್ರಕರಣಗಳು ದೃಢಪಟ್ಟಿದ್ದವು.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,36,842 ಕ್ಕೆ ಏರಿದೆ. ಸೋಂಕು ದೃಢ ಪ್ರಮಾಣ ಶೇಕಡ 15.52 ರಷ್ಟಿದೆ.

24 ಗಂಟೆಗಳಲ್ಲಿ 2,67,753 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು