Covid-19 India Updates: 62 ಲಕ್ಷಕ್ಕೂ ಹೆಚ್ಚು ಮಂದಿಗೆ ಕೋವಿಡ್–19 ಲಸಿಕೆ

ನವದೆಹಲಿ: ದೇಶದಾದ್ಯಂತ ಈವರೆಗೆ 62,59,008 ಮಂದಿಗೆ ಕೋವಿಡ್–19 ವಿರುದ್ಧ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
24 ಗಂಟೆ ಅವಧಿಯಲ್ಲಿ ದೇಶದಲ್ಲಿ 9,110 ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿದ್ದು, 78 ಸೋಂಕಿತರು ಅಸುನೀಗಿದ್ದಾರೆ. 14,016 ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 1,08,47,304ಕ್ಕೆ ಏರಿಕೆಯಾಗಿದೆ. ಒಟ್ಟು 1,05,48,521 ಸೋಂಕಿತರು ಚೇತರಿಸಿಕೊಂಡಿದ್ದು, 1,55,158 ಮೃತಪಟ್ಟಿದ್ದಾರೆ. ಸದ್ಯ, 1,43,625 ಸಕ್ರಿಯ ಪ್ರಕರಣಗಳಿವೆ.
ಓದಿ: ಹಿಮನದಿ ದುರಂತ: ಸುರಂಗದಿಂದ ಪಾರಾಗಿದ್ದು ಹೇಗೆ? ಭಯಾನಕ ಅನುಭವ ವಿವರಿಸಿದ ಸಂತ್ರಸ್ತ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.