ನವದೆಹಲಿ: ಕೇರಳ, ದೆಹಲಿ, ಪುದುಚೇರಿ, ಮೇಘಾಲಯ, ಗೋವಾ ಮತ್ತು ಮಿಜೋರಾಂಗಳಲ್ಲಿ ಕೋವಿಡ್–19 ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನಿರ್ಬಂಧಗಳನ್ನು ತುಸು ಸಡಿಲಿಸಲಾಗಿದೆ.

ಕೇರಳದಲ್ಲಿ ಜೂನ್ 9 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಸಾಮಾನ್ಯ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ವಿಜಯನ್ ತಿಳಿಸಿದ್ದಾರೆ.

ಓದಿ:ಕೋವಿಡ್ ಹೆಚ್ಚಳ: ಗೋವಾದಲ್ಲಿ ಜೂನ್ 7ರವರೆಗೆ ಲಾಕ್‌ಡೌನ್ ವಿಸ್ತರಣೆ

ಈ ಮಧ್ಯೆ, ದೆಹಲಿಯಲ್ಲಿ ಸದ್ಯ ಕೊರೊನಾ ನಿಯಂತ್ರಣದಲ್ಲಿದ್ದು, ಹಂತಹಂತವಾಗಿ ಲಾಕ್‌ಡೌನ್ ಸಡಿಲಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಸದ್ಯ ಜೂನ್ 7ರ ವರೆಗೆ ಲಾಕ್‌ಡೌನ್ ವಿಸ್ತರಣೆಯಾಗಿದೆ.

ಪುದುಚೇರಿಯಲ್ಲಿ ಜೂನ್ 7ರ ವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ.

ಓದಿ:ಕೋವಿಡ್: ಕೇರಳದಲ್ಲಿ ಜೂನ್ 9ರವರೆಗೆ ಲಾಕ್‌ಡೌನ್ ವಿಸ್ತರಣೆ

ಮಿಜೋರಾಂ, ಮೇಘಾಲಯಗಳಲ್ಲಿ ಜೂನ್ 6ರ ವರೆಗೆ ಮತ್ತು ಗೋವಾದಲ್ಲಿ ಜೂನ್ 7ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ.

‘ಜೂನ್ 7ರ ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಆದಕ್ಕೆ ಸಂಬಂಧಿಸಿದ ಆದೇಶಗಳನ್ನು ಆಯಾ ಜಿಲ್ಲಾಧಿಕಾರಿಗಳು ಹೊರಡಿಸಬೇಕು’ ಎಂದು ಗೋವಾ ಮುಖ್ಯಮಂತ್ರಿ ಕಚೇರಿ ಶನಿವಾರ ಟ್ವೀಟ್ ಮಾಡಿತ್ತು.

ಓದಿ:ದೆಹಲಿಯಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಸಲು ನಿರ್ಧಾರ: ಸಿಎಂ ಕೇಜ್ರಿವಾಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.