ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಂ ಖಾನ್ ಆರೋಗ್ಯ ಗಂಭೀರ: ಹೇಳಿಕೆ ಬಿಡುಗಡೆ ಮಾಡಿದ ಆಸ್ಪತ್ರೆ

Last Updated 26 ಮೇ 2021, 14:51 IST
ಅಕ್ಷರ ಗಾತ್ರ

ಲಖ್ನೋ: ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಆದರೆ ಸದ್ಯ ನಿಯಂತ್ರಣದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿರುವ ಅಜಂ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಜಂ ಖಾನ್ ಪುತ್ರ ಮೊಹಮ್ಮದ್ ಅಬ್ದುಲ್ಲಾ ಖಾನ್ ಆರೋಗ್ಯ ಸ್ಥಿರವಾಗಿದೆ ಎಂದು ಲಖ್ನೋದ ಮೇದಾಂತ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅವರ ಬಗ್ಗೆ ವೈದ್ಯರು ನಿಗಾ ಇರಿಸಿದ್ದಾರೆ.

ಅಜಂ ಖಾನ್ ಶ್ವಾಸಕೋಶದಲ್ಲಿ ಸೋಂಕು ಕಂಡುಬಂದ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಗಂಭೀರವಾಗಿದ್ದರೂ, ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.

ಮೇದಾಂತ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅಜಂ ಖಾನ್ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯಿಂದ ಪರಿಶೀಲನೆ ನಡೆಸುತ್ತಿದೆ ಎಂದು ಮೇದಾಂತ ಆಸ್ಪತ್ರೆ ಹೇಳಿದೆ.

ಸೀತಾಪುರ್ ಜೈಲಿನಿಂದ ಅಜಂ ಖಾನ್ ಮತ್ತು ಅವರ ಪುತ್ರನನ್ನು ಮೇ 9 ರಂದು ಕೋವಿಡ್ ಚಿಕಿತ್ಸೆಗಾಗಿ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT