ಗುರುವಾರ , ಫೆಬ್ರವರಿ 25, 2021
19 °C

ಮೊದಲ ದಿನ ಯಶಸ್ವಿ ಅಭಿಯಾನ: 1.65 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್‌ ಲಸಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಲಸಿಕೆ ಅಭಿಯಾನದ ಮೊದಲ ದಿನ ದೇಶದಾದ್ಯಂತ ಇದ್ದ 3 ಸಾವಿರಕ್ಕೂ ಅಧಿಕ ಲಸಿಕಾ ಕೇಂದ್ರಗಳಲ್ಲಿ 1.65 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೋವಿಡ್‌–19 ಲಸಿಕೆಯ ಚುಚ್ಚುಮದ್ದು ನೀಡಲಾಗಿದ್ದು, ಲಸಿಕೆ ಪಡೆದ ಬಳಿಕ ಆಸ್ಪತ್ರೆಗೆ ದಾಖಲಾದ ಯಾವುದೇ ಘಟನೆಗಳು ಇಲ್ಲಿಯವರೆಗೂ ನಡೆದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಮೊದಲ ದಿನ ಯಶಸ್ವಿಯಾಗಿ ಲಸಿಕೆ ಅಭಿಯಾನ ನಡೆದಿದೆ. 16,755 ಸಿಬ್ಬಂದಿ ಈ ಅಭಿಯಾನದಲ್ಲಿ ಭಾಗವಹಿಸಿದ್ದರು ಎಂದು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್‌ ಅಗ್ನಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಶೀಲ್ಡ್‌ ಹಾಗೂ ಕೋವ್ಯಾಕ್ಸಿನ್‌ ಲಸಿಕೆಗಳ ಚುಚ್ಚುಮದ್ದು ನೀಡಲಾಗಿದ್ದು, ಆಂಧ್ರ ಪ್ರದೇಶದಲ್ಲಿ 16,963 ಹಾಗೂ ಬಿಹಾರದಲ್ಲಿ 16,401, ಮಹಾರಾಷ್ಟ್ರದಲ್ಲಿ 15,727 ಜನರಿಗೆ ಲಸಿಕೆ ನೀಡಲಾಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು