ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ: ಜುಲೈ ಗುರಿ ತಲುಪುವ ಸಾಧ್ಯತೆ ಕಡಿಮೆ – ವರದಿ

Last Updated 13 ಜುಲೈ 2021, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಜುಲೈನಲ್ಲಿ ಕೋವಿಡ್‌ ಲಸಿಕೆಯ 51.6 ಕೋಟಿ ಡೋಸ್‌ಗಳನ್ನು ನೀಡುವ ಗುರಿಯನ್ನು ತಲುಪುವ ಸಾಧ್ಯತೆಗಳಿಲ್ಲಎಂದು ಮೂಲಗಳು ಹೇಳಿವೆ.

ಈಗಾಗಲೇ ರೂಪಿಸಿರುವ ಯೋಜನೆ ಪ್ರಕಾರ, ಲಸಿಕೆಯ 13 ಕೋಟಿ ಡೋಸ್‌ಗಳನ್ನು ಪೂರೈಕೆ ಮಾಡಬೇಕಿದೆ. ಇಷ್ಟೊಂದು ಪ್ರಮಾಣದ ಡೋಸ್‌ಗಳನ್ನು ಮುಂದಿನ 18 ದಿನಗಳಲ್ಲಿ ಪೂರೈಕೆ ಮಾಡಬೇಕಿದೆ. ಹೀಗಾಗಿ ಜುಲೈ ತಿಂಗಳಿನ ನಿಗದಿತ ಗುರಿಯನ್ನು ಮುಟ್ಟುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಇವೇ ಮೂಲಗಳು ಹೇಳಿವೆ.

‘18 ದಿನಗಳಲ್ಲಿ ಇಷ್ಟೊಂದು ಪ್ರಮಾಣದ ಡೋಸ್‌ಗಳಷ್ಟು ಲಸಿಕೆ ನೀಡಬೇಕು ಎಂದರೆ, ಪ್ರತಿ ದಿನ 70 ಲಕ್ಷಕ್ಕೂ ಅಧಿಕ ಡೋಸ್‌ಗಳ ಅಗತ್ಯವಿದೆ. ಆದರೆ,ಈಗ ಪ್ರತಿದಿನ 40 ಲಕ್ಷಕ್ಕಿಂತ ಕಡಿಮೆ ಡೋಸ್‌ಗಳಷ್ಟು ಲಸಿಕೆಯನ್ನು ನೀಡಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

‘ಲಸಿಕೆಯ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ವಿಶ್ವದ ಅನೇಕ ರಾಷ್ಟ್ರಗಳಿಗೆ ಲಸಿಕೆಯನ್ನು ಪೂರೈಕೆ ಮಾಡುವ ರಾಷ್ಟ್ರವಾದ ಭಾರತವೇ ಈಗ ದೇಶೀಯ ಲಸಿಕೆ ಬೇಡಿಕೆಯನ್ನು ಪೂರೈಸಲು ಹೆಣಗಾಡಬೇಕಾಗಿರುವುದು ದುರದೃಷ್ಟಕರ’ ಎಂದು ಜಾರ್ಜ್‌ ಇನ್ಸ್‌ಟಿಟ್ಯೂಟ್‌ ಫಾರ್‌ ಗ್ಲೋಬಲ್‌ ಹೆಲ್ತ್‌ನನಲ್ಲಿ ಹಿರಿಯ ಸಂಶೋಧಕರಾಗಿರುವ ಉಮ್ಮೆನ್‌ ಜಾನ್‌ ಹೇಳಿದರು.

ಪುಣೆ ಮೂಲದ ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾದಲ್ಲಿ ಜುಲೈ ಮತ್ತು ಆಗಸ್ಟ್‌ನಲ್ಲಿ ಕೋವಿಶೀಲ್ಡ್‌ ಲಸಿಕೆಯ 10 ಕೋಟಿ ಡೋಸ್‌ಗಳನ್ನು ಉತ್ಪಾದಿಸಲಾಗುತ್ತದೆ ಎಂದು ಮೂಲಗಳು ಹೇಳುತ್ತವೆ.

ಆದರೆ, ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾ ಹಾಗೂ ಭಾರತ್‌ ಬಯೋಟೆಕ್‌ ಕಂಪನಿಗಳು ತಮ್ಮ ಒಟ್ಟು ಉತ್ಪಾದನಾ ಸಾಮರ್ಥ್ಯಕ್ಕಿಂತ ಶೇ 30ರಷ್ಟು ಡೋಸ್‌ಗಳನ್ನು ಈ ವರ್ಷದ ಮೊದಲ ಐದುಗಳ ಅವಧಿಯಲ್ಲಿ ಪೂರೈಸಿವೆ. ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಈ ಮಾಹಿತಿಯನ್ನು ಉಲ್ಲೇಖಿಸಲಾಗಿದೆ.

ಮುಂದಿನ ಮೂರು ತಿಂಗಳ ಅವಧಿಯಲ್ಲಿ ಆಗಬಹುದಾದ ಒಟ್ಟು ಉತ್ಪಾದನೆ, ಅವುಗಳ ಉತ್ಪಾದನಾ ಸಾಮರ್ಥ್ಯ ಕುರಿತು ಮಾಹಿತಿ ಪಡೆಯಲು ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾ ಹಾಗೂ ಭಾರತ್‌ ಬಯೋಟೆಕ್‌ ಕಂಪನಿಗಳನ್ನು ‘ಪ್ರಜಾವಾಣಿ’ ಸಂಪರ್ಕಿಸಿತು. ಆದರೆ, ಎರಡೂ ಕಂಪನಿಗಳು ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT