ಭಾನುವಾರ, ಜೂನ್ 20, 2021
25 °C

ಕೋವಿಡ್–19: ಕೇರಳದಲ್ಲಿ ಲಾಕ್‌ಡೌನ್ ಮೇ 23ರ ವರೆಗೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೋವಿಡ್–19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಅನ್ನು ಮೇ 23ರ ವರೆಗೆ ವಿಸ್ತರಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೊಷಿಸಿದ್ದಾರೆ.

ಈ ಹಿಂದೆ ಮೇ 8ರಿಂದ 16ರ ವರೆಗೆ ಕೇರಳದಲ್ಲಿ ಲಾಕ್‌ಡೌನ್ ಘೋಷಿಸಲಾಗಿತ್ತು.

ಓದಿ: ಕೋವಿಡ್–19 ಬಿಕ್ಕಟ್ಟು: ಕೇರಳದಲ್ಲಿ ಆಮ್ಲಜನಕ, ಹಾಸಿಗೆ ಕೊರತೆ

ಕೇರಳದಲ್ಲಿ ಕೆಳದ ಕೆಲವು ವಾರಗಳಿಂದ ಹೊಸ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 97 ಮಂದಿ ಸೋಂಕಿತರು ಮೃತಪಟ್ಟಿದ್ದರು.

ಕೋವಿಡ್‌–19 ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕದ ಕೊರತೆ ಎದುರಾಗಿರುವುದಾಗಿ ಈಚೆಗೆ ವರದಿಯಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು