ಮಂಗಳವಾರ, ಏಪ್ರಿಲ್ 20, 2021
25 °C

ಕೋವಿಡ್‌: ಮಧ್ಯಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಲಾಕ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌ (ಪಿಟಿಐ‌): ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಮಧ್ಯಪ್ರದೇಶದ ನಾಲ್ಕು ಜಿಲ್ಲೆಗಳ ಕೆಲವು ನಗರ ಪ್ರದೇಶಗಳಲ್ಲಿ ಸರ್ಕಾರ ಲಾಕ್‌ಡೌನ್ ಘೋಷಿಸಿದೆ.

ಛಿಂದ್ವಾರಾ ಜಿಲ್ಲೆಯ ಕೆಲವು ನಗರ ಪ್ರದೇಶಗಳು ಮತ್ತು ರತ್ಲಾಮ್ ನಗರದಲ್ಲಿ ಈಗಾಗಲೇ ಲಾಕ್‌ಡೌನ್ ಘೋಷಣೆಯಾಗಿದೆ. ಈಗ ಬೆತುಲ್‌ ಜಿಲ್ಲೆ ಮತ್ತು ಖರ್ಗೊನೆ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ ಲೌಕ್‌ಡೌನ್ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆತುಲ್‌ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 10 ಗಂಟೆಯಿಂದ ಹಾಗೂ ಖರ್ಗೊನ್‌ ಜಿಲ್ಲೆಯಲ್ಲಿ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್ ಜಾರಿಯಾಗಲಿದೆ. ಲಾಕ್‌ಡೌನ್ ಘೋಷಣೆಯಾಗಿರುವ ನಾಲ್ಕು ಜಿಲ್ಲೆಗಳ ಮೇಲೆ ತೀವ್ರ ನಿಗಾ ಇಡಲು ವಿಶೇಷ ಅಧಿಕಾರಿಗಳ ಪ್ರತ್ಯೇಕ ತಂಡವನ್ನು ನಿಯೋಜಿಸಿರುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು