ನವದೆಹಲಿ: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶದಾದ್ಯಂತ 13,058 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದು 231 ದಿನಗಳಲ್ಲೇ ಅತ್ಯಂತ ಕಡಿಮೆ ಸೋಂಕಿನ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಪ್ರಕರಣಗಳು ಸೇರಿದಂತೆ ದೇಶದಲ್ಲಿ ಈವರೆಗಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,40,94,373ಕ್ಕೆ ಏರಿಕೆಯಾಗಿದೆ.

ಸೋಮವಾರ ಕೋವಿಡ್ ಸೋಂಕಿನಿಂದ 164 ಮಂದಿ ಮೃತಪಟ್ಟಿದ್ದಾರೆ.ಇಲ್ಲಿವರೆಗಿನ ಒಟ್ಟು ಸಾವಿನ ಸಂಖ್ಯೆ 4,52,454ಕ್ಕೆ ಏರಿದೆ.ಸಕ್ರಿಯ ಪ್ರಕರಣಗಳು ಸಂಖ್ಯೆ 1,83,118 ಕ್ಕೆ ಇಳಿಕೆಯಾಗಿದೆ. ಕಳೆದ ಒಂದು ದಿನದಲ್ಲಿ ಒಟ್ಟು 6576 ಹೊಸ ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, ಇದು 227 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕಳೆದ ಇಪ್ಪತ್ತೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆ ದಾಖಲಾಗುತ್ತಿದೆ. ಹಾಗೆಯೇ, 114 ದಿನಗಳಿಂದ ನಿತ್ಯ 50 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗುತ್ತಿವೆ.

ಒಟ್ಟು ಸೋಂಕಿತ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.54. ಇದೇ ರೀತಿ ಕೋವಿಡ್ -19 ನಿಂದ ಗುಣುಮುಖರಾಗುತ್ತಿರುವ ಪ್ರಮಾಣವು ಶೇ 98.14ರಷ್ಟು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.