ಬುಧವಾರ, ಮೇ 18, 2022
25 °C

ಕೋವಿಡ್‌–19: ಮಹಾರಾಷ್ಟ್ರದಲ್ಲಿ ಮತ್ತೆ ಪರಿಸ್ಥಿತಿ ಗಂಭೀರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ, ಔರಂಗಾಬಾದ್‌: ಮಹಾರಾಷ್ಟ್ರದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಮಹಾರಾಷ್ಟ್ರದಲ್ಲಿ ಸೋಮವಾರ 3,365 ಹಾಗೂ ಭಾನುವಾರ 4,092 ಪ್ರಕರಣಗಳು ದೃಢಪಟ್ಟಿವೆ. ಸೋಮವಾರ ಸೋಂಕಿನಿಂದ 23 ರೋಗಿಗಳು ಮೃತಪಟ್ಟರೆ 3,100 ಮಂದಿ ಗುಣಮುಖರಾಗಿದ್ದಾರೆ.

’ಕೆಲವು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಹೆಚ್ಚುತ್ತಿವೆ. ಆದರೂ, ಜನರು ಕೋವಿಡ್‌–19 ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ, ಕಠಿಣ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಲಿದೆ’ ಎಂದು ಉಪ ಮುಖ್ಯಮಂತ್ರಿ ಅಜೀತ್‌ ಪವಾರ್‌ ತಿಳಿಸಿದ್ದಾರೆ.

ಪರಿಸ್ಥಿಯ ಪರಾಮರ್ಶೆ ನಡೆಸಲು  ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಮಂಗಳವಾರ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಸಭೆ ಕರೆದಿದ್ದಾರೆ.

ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಮರಾವತಿಯಲ್ಲಿ ಫೆಬ್ರುವರಿ ಆರಂಭದಿಂದಲೇ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ, ಹೊಸದಾಗಿ ಲಾಕ್‌ಡೌನ್‌ ಜಾರಿಗೊಳಿಸುವ ಉದ್ದೇಶ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು