ಮಂಗಳವಾರ, ಏಪ್ರಿಲ್ 20, 2021
32 °C

ಕೋವಿಡ್‌ ಲಸಿಕೆ: 50 ಲಕ್ಷಕ್ಕೂ ಅಧಿಕ ಜನರಿಂದ ನೋಂದಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಲಸಿಕೆ ಪಡೆಯಲು ‘ಕೋ–ವಿನ್‌ 2.0’ ಆನ್‌ಲೈನ್‌ ವೇದಿಕೆಯಲ್ಲಿ 50 ಲಕ್ಷಕ್ಕೂ ಅಧಿಕ ಜನರು ನೋಂದಾಯಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

‘48 ಗಂಟೆಗಿಂತ ಕಡಿಮೆ ಅವಧಿಯಲ್ಲಿ ಇಷ್ಟೊಂದು ಜನರು ನೋಂದಣಿ ಮಾಡಿಕೊಳ್ಳುವ ಮೂಲಕ ಲಸಿಕೆ ಪಡೆಯಲು ಇಚ್ಛೆ ವ್ಯಕ್ತಪಡಿಸಿರುವುದು ತಿಳಿಯುತ್ತದೆ. ಇದು ಲಸಿಕೆ ಕುರಿತಾದ ಹಿಂಜರಿಕೆ ಕಡಿಮೆಯಾಗುತ್ತಿರುವುದರ ಸಂಕೇತ’ ಎಂದೂ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

‘ಕೆಲವರು ಎರಡನೇ ಡೋಸ್‌ ‍ಪಡೆದಿಲ್ಲ. ಅಂಥವರು ಆರು ವಾರಗಳ ಒಳಗಾಗಿ ಎರಡನೇ ಡೋಸ್‌ ಪಡೆಯಬೇಕು’ ಎಂದು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್‌ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು