ಗುರುವಾರ , ಮೇ 13, 2021
16 °C

ಪತ್ರಕರ್ತರು ಕೋವಿಡ್‌ ಮುಂಚೂಣಿ ಕಾರ್ಯಕರ್ತರು: ಮಧ್ಯಪ್ರದೇಶ ಸಿಎಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌: ಮಧ್ಯಪ್ರದೇಶ ಸರ್ಕಾರ ನೋಂದಾಯಿತ ಮಾಧ್ಯಮ ವೃತ್ತಿಪರರರನ್ನು ಕೊರೊನಾ ‘ಮುಂಚೂಣಿ ಕಾರ್ಯಕರ್ತರು’ ಎಂದು ಘೋಷಿಸಿದೆ.

ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಶಿವರಾಜ್‌ ಚೌಹಾಣ್, ‘ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ಪತ್ರಕರ್ತರು ತಮ್ಮ ಜೀವವನ್ನು ಲೆಕ್ಕಿಸದೇ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿರುವ ಎಲ್ಲ ನೋಂದಾಯಿತ ಪತ್ರಕರ್ತರನ್ನು ಕೊರೊನಾ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ. ಅವರ ರಕ್ಷಣೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ‘ ಎಂದು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಪ್ರಕಾರ, ಪ್ರಸ್ತುತ ರಾಜ್ಯ ಸರ್ಕಾರದೊಂದಿಗೆ ನೋಂದಾವಣೆ ಮಾಡಿಕೊಂಡಿರುವ 4 ಸಾವಿರ ಪತ್ರಕರ್ತರು ರಾಜ್ಯದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು