ಗುರುವಾರ , ಅಕ್ಟೋಬರ್ 29, 2020
26 °C
ಆಗಸ್ಟ್‌ 21ರವರೆಗೆ ಬಿಪಿಆರ್‌ಡಿ ಸಿದ್ಧಪಡಿಸಿರುವ ವರದಿಯಲ್ಲಿ ಉಲ್ಲೇಖ

ಕೋವಿಡ್‌-19: 76 ಸಾವಿರ ಭದ್ರತಾ ಸಿಬ್ಬಂದಿಗೆ ಸೋಂಕು, 401 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ಸಿಆರ್‌ಪಿಎಫ್‌, ಸಿಐಎಸ್‌ಎಫ್‌, ಬಿಎಸ್‌ಎಫ್‌ ಮತ್ತು ಎನ್‌ಎಸ್‌ಜಿ, ಅರೆ ಸೇನಾಪಡೆ, ಪೊಲೀಸ್‌ ಸೇರಿದಂತೆ ದೇಶದಾದ್ಯಂತ 70 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ಕನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಬಿಪಿಆರ್‌ಡಿ) ಆಗಸ್ಟ್ 21ರವರೆಗೆ ಮಾಹಿತಿ ಸಂಗ್ರಹಿಸಿ ಬಿಡುಗಡೆ ಮಾಡಿರುವ ‘ಇಂಡಿಯನ್ ಪೊಲೀಸ್ ರೆಸ್ಪಾನ್ಸ್‌ ಟು ಕೋವಿಡ್‌–19‘ – ವರದಿಯ ಪ್ರಕಾರ 76,768 ಸಿಬ್ಬಂದಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, 401 ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 

ಈ ವರದಿಯ ಪ್ರಕಾರ ಮಹಾರಾಷ್ಟ್ರದಲ್ಲಿ ಕೋವಿಡ್‌ 19 ಸೋಂಕಿನಿಂದ 129 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 12,760 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ದೇಶದಲ್ಲೇ ಅತಿ ಹೆಚ್ಚು ಭದ್ರತಾ ಸಿಬ್ಬಂದಿ ಸಾವನ್ನಪ್ಪಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ತೆಲಂಗಾಣ ಎರಡನೇ ಸ್ಥಾನದಲ್ಲಿದ್ದು, ಅಲ್ಲಿ ಕೋವಿಡ್‌ನಿಂದ ಸಾವನ್ನಪ್ಪಿರುವ ಭದ್ರತಾ ಸಿಬ್ಬಂದಿಯ ಸಂಖ್ಯೆ 40.

76 ಸಾವಿರ ಸೋಂಕಿತ ಪ್ರಕರಣಗಳಲ್ಲಿ, ಅರೆ ಸೇನಾಪಡೆಯ 15,318 ಯೋಧರು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 5647  ಮಂದಿ ಇದ್ದಾರೆ. ಇದರಲ್ಲಿ ಸೋಂಕು ದೃಢಪಟ್ಟ ಸಿಆರ್‌ಪಿಎಫ್‌ನ  24 ಮಂದಿ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು