ಬುಧವಾರ, ಏಪ್ರಿಲ್ 14, 2021
28 °C

ಕೋವಿಡ್: 14 ರಾಜ್ಯ, 4ಕೇಂದ್ರಾಡಳಿತ ಪ್ರದೇಶಗಳಲ್ಲಿ ಗುರುವಾರ ಸಾವಿನ ಪ್ರಕರಣಗಳಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: 14 ರಾಜ್ಯಗಳು ಹಾಗೂ 4 ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-‌19 ನಿಂದಾಗಿ ಒಂದೇಒಂದು ಸಾವಿನ ಪ್ರಕರಣ ಸಂಭವಿಸಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಚಂಡೀಗಢ, ಗುಜರಾತ್‌, ಹರಿಯಾಣ, ಹಿಮಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್‌, ಒಡಿಶಾ, ಸಿಕ್ಕಿಂ, ತ್ರಿಪುರ ಮತ್ತು ಉತ್ತರಾಖಂಡ, ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್‌ ನಿಕೋಬರ್‌, ದಾದ್ರಾ ಮತ್ತು ನಗರ ಹವೇಲಿ, ಲಡಾಖ್ ಹಾಗೂ ಪುದುಚೇರಿ‌ಯಲ್ಲಿ ಗುರುವಾರ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 113 ಮಂದಿ ಕೋವಿಡ್-19 ನಿಂದಾಗಿ ಮೃತಪಟ್ಟಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ 60, ಪಂಜಾಬ್‌ ಮತ್ತು ಕೇರಳದಲ್ಲಿ ಕ್ರಮವಾಗಿ 15 ಮತ್ತು 14 ಪ್ರಕರಣಗಳು ವರದಿಯಾಗಿವೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ತಲಾ 4 ಮತ್ತು ಛತ್ತೀಸಗಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಉಳಿದಂತೆ ಗೋವಾ, ತೆಲಂಗಾಣದಲ್ಲಿ ತಲಾ 2, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್‌, ಜಮ್ಮು ಕಾಶ್ಮೀರ, ದೆಹಲಿ, ಬಿಹಾರ ಮತ್ತು ಆಂಧ್ರಪ್ರದೇಶದಲ್ಲಿ ತಲಾ ಒಂದೊಂದು ಸಾವಿನ ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಈವರೆಗೆ ಒಟ್ಟು 1,11,73,761 ಪ್ರಕರಣಗಳು ವರದಿಯಾಗಿವೆ. ಈದರಲ್ಲಿ 1,57,548 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಉಳಿದಂತೆ 1,08,39,894 ಮಂದಿ ಗುಣಮುಖರಾಗಿದ್ದು, ಇನ್ನೂ 1,76,319 ಸಕ್ರಿಯ ಪ್ರಕರಣಗಳಿವೆ.

ಒಟ್ಟು 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾವಿರಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳು ಇವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು