ಗುರುವಾರ , ಮೇ 13, 2021
16 °C

ಧಾರ್ಮಿಕ ಕ್ಷೇತ್ರಗಳಿಗೆ ಐದಕ್ಕಿಂತ ಹೆಚ್ಚು ಜನರು ಪ್ರವೇಶಿಸಲು ಅವಕಾಶವಿಲ್ಲ: ಯೋಗಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಲಖನೌ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿರಿಸಿ ಧಾರ್ಮಿಕ ಕ್ಷೇತ್ರಗಳಿಗೆ ಐದಕ್ಕಿಂತ ಹೆಚ್ಚು ಜನರು ಒಟ್ಟಿಗೆ ಪ್ರವೇಶಿಸಲು ಅವಕಾಶ ನೀಡುವಂತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ʼಕೋವಿಡ್-19 ಹರಡುವಿಕೆಯನ್ನು ತಡೆಯಲು ರಾಜ್ಯವು ಉತ್ತಮ ಸಂಪನ್ಮೂಲ ಮತ್ತು ಅನುಭವವನ್ನು ಹೊಂದಿದೆ. ಕೋವಿಡ್ ನಿರ್ವಹಣೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ಏಕೀಕೃತ ಆದೇಶ ಮತ್ತು ನಿಯಂತ್ರಣ ವ್ಯವಸ್ಥೆಯನ್ನು ಒಳಗೊಂಡ ಕೇಂದ್ರಗಳನ್ನು ಎಲ್ಲ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ. ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಇದನ್ನು ಪರಿಣಾಮಕಾರಿಯಾಗಿ ಬಳಸಬೇಕುʼ ಎಂದು ಹೇಳಿದ್ದಾರೆ.

ಇದೇ ವೇಳೆ ಒಂದೇಬಾರಿ ಐದಕ್ಕೂ ಹೆಚ್ಚು ಜನರು ಧಾರ್ಮಿಕ ಸ್ಥಳಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಎಂದು ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂದುವರಿದು, ಕಂಟೈನ್‌ಮೆಂಟ್‌ ವಲಯಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ, ಈ ವಲಯಗಳಲ್ಲಿನ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಇದರ ಮೇಲ್ವಿಚಾರಣೆಯನ್ನು ಸಮಗ್ರ ಆಜ್ಞೆ ಮತ್ತು ನಿಯಂತ್ರಣ ಕೇಂದ್ರಗಳು ನಿರ್ವಹಿಸಬೇಕು ಎಂದೂ ಹೇಳಿದ್ದಾರೆ.

ಶನಿವಾರ ದೇಶದಲ್ಲಿ 1,45,384 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸತತ ನಾಲ್ಕನೇ ದಿನ ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು