ನವದೆಹಲಿ: ಮುಂದಿನ ದಿನಗಳಲ್ಲಿ ಸಾಲುಸಾಲು ಹಬ್ಬಗಳಿದ್ದು, ಈ ಸಂದರ್ಭದಲ್ಲಿ ಕೊರೊನಾ ಸೋಂಕು ಪ್ರಸರಣ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರ ಸರ್ಕಾರ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 1,595 ಆಮ್ಲಜನಕ ಉತ್ಪಾದನಾ ಘಟಕಗಳಿಗೆ ಚಾಲನೆ ನೀಡಿದೆ.
ಇನ್ನೂ, 2,000ಕ್ಕೂ ಅಧಿಕ ಇಂಥ ಘಟಕಗಳ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
‘ಪ್ರತಿ ದಿನ 4,600 ಟನ್ ಆಮ್ಲಜನಕ ಉತ್ಪಾದಿಸುವ ಗುರಿ ಇದೆ. ಈಗ 1,595 ಆಮ್ಲಜನಕ ಉತ್ಪಾದನಾ ಘಟಕಗಳ (ಪ್ರೆಷರ್ ಸ್ವಿಂಗ್ ಅಡ್ಸಾರ್ಪ್‌ಷನ್ ಪ್ಲಾಂಟ್ಸ್) ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇವುಗಳಿಂದ 2,100 ಟನ್‌ನಷ್ಟು ಆಮ್ಲಜನಕ ಉತ್ಪಾದನೆಯಾಗುತ್ತದೆ’ ಎಂದು ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್‌ನ ಎರಡನೇ ಅಲೆ ಕಾಣಿಸಿಕೊಂಡಾಗ, ಆಮ್ಲಜನಕದ ತೀವ್ರ ಕೊರತೆ ಕಾಣಿಸಿಕೊಂಡಿತ್ತು. ಇದರಿಂದಾಗಿ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಪರದಾಡಿದವು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.