ಎರಡನೇ ಮಹಾಯುದ್ಧದ ನಂತರದ ಅತಿದೊಡ್ಡ ಸವಾಲು ಕೋವಿಡ್: ಪ್ರಧಾನಿ ಮೋದಿ

ರಿಯಾಧ್/ನವದೆಹಲಿ: ಎರಡನೇ ಮಹಾಯುದ್ಧದ ನಂತರ ಜಗತ್ತು ಎದುರಿಸುತ್ತಿರುವ ಅತಿದೊಡ್ಡ ಸವಾಲು ಕೋವಿಡ್–19. ಇದು ಮಾನವ ಇತಿಹಾಸದಲ್ಲಿ ಮಹತ್ವದ ತಿರುವೂ ಹೌದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಿ20 ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಅವರು, ಒಕ್ಕೂಟದ ಸಮರ್ಥ ಕಾರ್ಯನಿರ್ವಹಣೆಗೆ ಭಾರತ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕೊಡುಗೆ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಮೋದಿ ನೇತೃತ್ವದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ಯಶಸ್ವಿಯಾಗಿ ಎದುರಿಸಿದ್ದೇವೆ: ಶಾ
‘ಎಲ್ಲಿಂದ ಬೇಕಾದರೂ ಕೆಲಸ ಮಾಡಿ’ ಎಂಬುದು ಕೊರೊನೋತ್ತರ ಜಗತ್ತಿನಲ್ಲಿ ಸಾಮಾನ್ಯವಾಗಿದೆ ಎಂದ ಮೋದಿ ವರ್ಚುವಲ್ ಜಿ20 ಕಾರ್ಯಾಲಯ ಸ್ಥಾಪಿಸಲು ಸಲಹೆ ನೀಡಿದ್ದಾರೆ.
ಕೊರೊನೋತ್ತರ ಜಗತ್ತಿಗೆ ಹೊಸ ಸೂಚ್ಯಂಕ ಅಭಿವೃದ್ಧಿಪಡಿಸಲು ಅವರು ಸಲಹೆ ನೀಡಿದ್ದಾರೆ. ಪ್ರತಿಭೆಗೆ ಒಂದೆಡೆ ವೇದಿಕೆ ಕಲ್ಪಿಸುವುದು, ಸಮಾಜದ ಎಲ್ಲ ವರ್ಗಗಳಿಗೂ ತಂತ್ರಜ್ಞಾನವು ತಲುಪುವಂತೆ ನೋಡಿಕೊಳ್ಳುವುದು, ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನಂಬಿಕೆಯ ಮನೋಭಾವದೊಂದಿಗೆ ಭೂಮಿಯೊಂದಿಗೆ ವ್ಯವಹರಿಸುವುದು, ಈ ನಾಲ್ಕು ಅಂಶಗಳು ಹೊಸ ಸೂಚ್ಯಂಕದಲ್ಲಿರಬೇಕು ಎಂದು ಅವರು ಹೇಳಿದ್ದಾರೆ.
ಇದರ ಆಧಾರದಲ್ಲಿ ಜಿ20 ಒಕ್ಕೂಟವು ಹೊಸ ಜಗತ್ತಿಗೆ ಶಂಕುಸ್ಥಾಪನೆ ನೆರವೇರಿಸಬೇಕು ಎಂದು ಮೋದಿ ಕರೆನೀಡಿದ್ದಾರೆ.
ಇದನ್ನೂ ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ
ಸೌದಿ ಅರೇಬಿಯಾದ ದೊರೆ ಸಲ್ಮಾನ್ ಅವರು ಜಿ20 ಶೃಂಗಸಭೆಗೆ ಚಾಲನೆ ನೀಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಈ ಬಾರಿ ವರ್ಚುವಲ್ ಸಭೆಯನ್ನು ಆಯೋಜಿಸಲಾಗಿದೆ. 2022ರ ಜಿ20 ಶೃಂಗಸಭೆಯ ಆತಿಥ್ಯವನ್ನು ಭಾರತ ವಹಿಸಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.