ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವರ ಜತೆ ಪ್ರಧಾನಿ ಮೋದಿ ನಾಳೆ ಸಭೆ

Last Updated 29 ಜೂನ್ 2021, 6:40 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರುಗಳೊಂದಿಗೆ ಬುಧವಾರ ಸಂಜೆ ಸಭೆ ನಡೆಸಲಿದ್ದು, ಕೋವಿಡ್‌ ಪರಿಸ್ಥಿತಿ ಮತ್ತು ಕೆಲವೊಂದು ಸಚಿವಾಲಯಗಳ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಮೂಲಗಳು ಮಂಗಳವಾರ ಹೇಳಿವೆ.

‘ಈ ಸಭೆಯು ವರ್ಚುವಲ್‌ ವೇದಿಕೆಯಲ್ಲಿ ನಡೆಯಲಿದ್ದು, ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯಗಳ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಂಪುಟ ವಿಸ್ತರಣೆ ಮತ್ತು ಸಂಪುಟ ಪುನರ್‌ರಚನೆಯ ವದಂತಿ ಹಬ್ಬಿರುವ ಸಂದರ್ಭದಲ್ಲಿ ಈ ನಡೆಯುತ್ತಿರುವ ಈ ಸಭೆ ವಿಶೇಷ ಮಹತ್ವ ಪಡೆದಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT