ಬುಧವಾರ, ಜುಲೈ 28, 2021
21 °C

ಜುಲೈ–ಆಗಸ್ಟ್‌ನಲ್ಲಿ ಜೆಇಇ ಮೇನ್ಸ್, ಸೆಪ್ಟೆಂಬರ್‌ಗೆ ನೀಟ್‌?

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಎಂಜಿನಿಯರಿಂಗ್ ಪ್ರವೇಶಕ್ಕಾಗಿ ಬಾಕಿ ಇರುವ ಜೆಇಇ ಮೇನ್ಸ್ ಪ್ರವೇಶ ಪರೀಕ್ಷೆಗಳನ್ನು ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆಸಲು ಹಾಗೂ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಡೆಸುವ ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್‌ಗೆ ಮುಂದೂಡುವ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 

ಆದರೆ, ಈ ನಿಟ್ಟಿನಲ್ಲಿ ಇನ್ನೂ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌–19 ಪರಿಸ್ಥಿತಿಯನ್ನು ಸಚಿವಾಲಯವು ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ ಎನ್ನಲಾಗಿದೆ.

ಪ್ರಸಕ್ತ ಸಾಲಿನಿಂದ ಜೆಇಇ ಮೇನ್ಸ್ ಅನ್ನು ವರ್ಷಕ್ಕೆ ನಾಲ್ಕು ಬಾರಿ ನಡೆಸಲು ತೀರ್ಮಾನಿಸಲಾಗಿದೆ. ಫೆಬ್ರುವರಿಯಲ್ಲಿ ಮೊದಲ ಹಂತ, ಮಾರ್ಚ್‌ನಲ್ಲಿ ಎರಡನೇ ಹಾಗೂ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮೂರನೇ ಮತ್ತು ನಾಲ್ಕನೇ ಹಂತದ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಕೋವಿಡ್–19 ಕಾರಣಕ್ಕಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು