ಗುರುವಾರ , ಆಗಸ್ಟ್ 11, 2022
23 °C

ಹರಿಯಾಣ: ಕೋವಿಡ್–19‌ನಿಂದ ಬಳಲುತ್ತಿದ್ದ ಸಚಿವ ವಿಜ್‌ ರೋಹ್ಟಕ್‌ ಆಸ್ಪತ್ರೆಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಂಬಾಲಾ: ಕೋವಿಡ್‌–19 ದೃಢಪಟ್ಟಿದ್ದರಿಂದ ಅಂಬಾಲಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್‌ ವಿಜ್‌ ಅವರನ್ನು ರೋಹ್ಟಕ್‌ನ ಪಿಜಿಐಎಂಎಸ್‌ ಆಸ್ಪತ್ರೆಗೆ ಭಾನುವಾರ ಸ್ಥಳಾಂತರಿಸಲಾಗಿದೆ.

‘ಸಚಿವ ವಿಜ್‌ ಅಸ್ವಸ್ಥಗೊಂಡ ಕಾರಣ ಅವರನ್ನು ರೋಹ್ಟಕ್‌ ಆಸ್ಪತ್ರೆಗೆ ಶನಿವಾರ ರಾತ್ರಿ ಸ್ಥಳಾಂತರಿಸಲಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ’ ಎಂದು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಕುಲದೀಪ್‌ ಸಿಂಗ್‌ ತಿಳಿಸಿದರು.

ಭಾರತ್‌ ಬಯೊಟೆಕ್‌ ಸಂಸ್ಥೆಯು ಕೋವಿಡ್‌ ಚಿಕಿತ್ಸೆಗೆ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್‌ ಲಸಿಕೆಯನ್ನು 67 ವರ್ಷದ ಅನಿಲ್‌ ಅವರ ಮೇಲೂ ಪ್ರಯೋಗಿಸಲಾಗಿತ್ತು. ಅದಾದ ನಂತರ ಡಿ.5ರಂದು ಅವರಿಗೆ ಕೋವಿಡ್‌–19 ದೃಢಪಟ್ಟಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು