ಶುಕ್ರವಾರ, ಮೇ 7, 2021
21 °C

ಪಂಜಾಬ್‌: ಕೋವಿಡ್‌ ಹೆಚ್ಚಳ, 10ನೇ ತರಗತಿ ಪರೀಕ್ಷೆ ರದ್ದು ಪಡಿಸಿದ ಸರ್ಕಾರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಅಮೃತಸರದಲ್ಲಿ 9ನೇ ತರಗತಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು–ಸಂಗ್ರಹ ಚಿತ್ರ

ನವದೆಹಲಿ: ಪಂಜಾಬ್‌ನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್‌ ಪ್ರಕಟಿಸಿದ್ದಾರೆ. 5ನೇ ತರಗತಿ, 8ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದೆಯೇ ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ.

ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಪಂಜಾಬ್‌ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. 12ನೇ ತರಗತಿಯ ಪಿಎಸ್‌ಇಬಿ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಪ್ರಕಟಿಸಿದೆ.

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸುವಂತೆ ಸಿಎಂ ಅಮರಿಂದರ್‌ ಸಿಂಗ್‌ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಬುಧವಾರ ಕೇಂದ್ರದ ಉನ್ನತ ಮಟ್ಟದ ಸಭೆಯಲ್ಲಿ 10ನೇ ತರಗತಿ ಪರೀಕ್ಷೆ ರದ್ದು ಪಡಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಪಂಜಾಬ್‌ನಲ್ಲಿ ಬುಧವಾರ 3,329 ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 63 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: Covid-19 India Update: 24 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಕೋವಿಡ್‌ ಪ್ರಕರಣ

ಇನ್ನಷ್ಟು ಓದು...

ಮುಂಬೈ: 5–ಸ್ಟಾರ್ ಹೊಟೇಲ್‌ಗಳಲ್ಲಿ ಕೋವಿಡ್‌ ರೋಗಿಗಳ ಆರೈಕೆಗೆ ಬಿಎಂಸಿ ಸಮ್ಮತಿ

ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ: ಮಾಲ್‌, ಜಿಮ್‌, ಸ್ಪಾಗಳು ಬಂದ್‌–ಕೇಜ್ರಿವಾಲ್

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು