ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳದಲ್ಲಿ ಕೋವಿಡ್‌ ಹೆಚ್ಚಳ: ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ರಾಹುಲ್‌ ಗಾಂಧಿ

Last Updated 18 ಏಪ್ರಿಲ್ 2021, 8:08 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ‍ಶ್ಚಿಮ ಬಂಗಾಳದ ತಮ್ಮೆಲ್ಲಾ ಚುನಾವಣಾ ರ‍್ಯಾಲಿಗಳನ್ನು ರದ್ದುಗೊಳಿಸಿದ್ದಾರೆ.

ಈ ಬಗ್ಗೆ ಭಾನುವಾರ ಟ್ವೀಟ್‌ ಮಾಡಿರುವ ಅವರು,‘ ಪ್ರಸ್ತುತ ಕೋವಿಡ್‌ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳದ ಎಲ್ಲಾ ರ‍್ಯಾಲಿಗಳನ್ನು ನಾನು ರದ್ದುಗೊಳಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ದೊಡ್ಡ ಸಾರ್ವಜನಿಕ ಸಭೆಗಳನ್ನು ಆಯೋಜಿಸಿವುದರಿಂದಾಗುವ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ರಾಜಕೀಯ ಪಕ್ಷಗಳು ರ‍್ಯಾಲಿಗಳನ್ನು ರದ್ದುಗೊಳಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

‘ದೇಶದಲ್ಲಿ ಕೋವಿಡ್‌ ಹೆಚ್ಚುತ್ತಿರುವಾಗ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ದೊಡ್ಡ ರ‍್ಯಾಲಿಗಳನ್ನು ಆಯೋಜಿಸುತ್ತಿದೆ’ ಎಂದು ಕಾಂಗ್ರೆಸ್‌ ಟೀಕಿಸಿದೆ.ಪ್ರಧಾನಿ ಅವರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್‌ ನಿಯಂತ್ರಿಸುವ ಬಗ್ಗೆ ಚರ್ಚೆ ನಡೆಸಬೇಕು. ಆದರೆ ಅವರು ದೊಡ್ಡ ರ‍್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT