ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ತೆಲಂಗಾಣ- ಶಾಲೆಗಳ ರಜೆ ಅವಧಿ ವಿಸ್ತರಣೆ, ತಮಿಳುನಾಡಿನಲ್ಲೂ ಶಾಲೆ ಬಂದ್

Last Updated 16 ಜನವರಿ 2022, 12:04 IST
ಅಕ್ಷರ ಗಾತ್ರ

ಹೈದರಾಬಾದ್‌: ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಲ್ಲಾ ಶಿಕ್ಷಣ ಸಂಸ್ಥೆಗಳ ರಜಾ ಅವಧಿಯನ್ನು ಜನವರಿ 30 ರವರೆಗೆ ವಿಸ್ತರಿಸಲಾಗಿದೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯು ಸೋಮವಾರ (ಜ.17) ನಡೆಯಲಿದೆ. ಪ್ರಮುಖವಾಗಿ ಕೋವಿಡ್‌ ಮತ್ತು ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ತಮಿಳುನಾಡು: ಜ.31ರವರೆಗೆ ಶಾಲೆಗಳು ಬಂದ್‌

ಚೆನ್ನೈ: ಕೋವಿಡ್‌ ಪ್ರಕರಣಗಳ ಹೆಚ್ಚಳದ ಕಾರಣ ರಾಜ್ಯದ 10–12 ತರಗತಿ ವಿದ್ಯಾರ್ಥಿಗಳ ಶಾಲೆಗಳ ಬಂದ್‌ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ಭಾನುವಾರ ಘೋಷಿಸಿದೆ.

10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಜನವರಿ 19 ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದೂ ಸರ್ಕಾರ ಹೇಳಿದೆ.

1 ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ದೃಷ್ಟಿಯಿಂದ ಭೌತಿಕ ತರಗತಿಗಳು ನಡೆಯುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT