ಗುರುವಾರ , ಜುಲೈ 29, 2021
27 °C

ಕೋವಿಡ್ ಲಸಿಕೆ ಹೊಸ ಮಾರ್ಗಸೂಚಿ ಜಾರಿ ಬಳಿಕ ಹೆಚ್ಚು ಲಸಿಕೆ ನೀಡಿದ ರಾಜ್ಯಗಳಿವು...

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪರಿಷ್ಕೃತ ಕೋವಿಡ್–19 ಲಸಿಕೆ ಮಾರ್ಗಸೂಚಿಯು ಅಸ್ತಿತ್ವಕ್ಕೆ ಬಂದಿದ್ದು, ಲಸಿಕೆ ಅಭಿಯಾನ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಸೋಮವಾರ ಗರಿಷ್ಠ ಸಂಖ್ಯೆಯಲ್ಲಿ ಲಸಿಕೆ ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ವಹಿಸಿಕೊಂಡಿದೆ.

ಆರೋಗ್ಯ ಸಚಿವಾಲಯವು ಜೂನ್‌ನಲ್ಲಿ ಲಭ್ಯವಿರುವ ಲಸಿಕೆಯ ಪ್ರಮಾಣದ ಬಗ್ಗೆ ರಾಜ್ಯಗಳಿಗೆ ಮಾಹಿತಿ ದೊರೆಯುವಂತೆ ಮಾಡಿದೆ. ಇದರಿಂದ ಜಿಲ್ಲಾವಾರು ಲಸಿಕೆ ನೀಡಿಕೆಗೆ ಯೋಜನೆ ರೂಪಿಸುವುದು ರಾಜ್ಯಗಳಿಗೆ ಸಾಧ್ಯವಾಗಿದೆ. ಪರಿಷ್ಕೃತ ಮಾರ್ಗಸೂಚಿ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ದಿನವೇ ಸುಮಾರು 81 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಓದಿ: 

ಒಟ್ಟಾರೆಯಾಗಿ ದೇಶದಾದ್ಯಂತ ಈವರೆಗೆ 28.7 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಜನಸಂಖ್ಯೆಯ ಶೇ 17ರಷ್ಟು ಮಂದಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡಲಾಗಿದೆ.

ಸೋಮವಾರ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಮಧ್ಯ ಪ್ರದೇಶ ಮೊದಲ ಸಾಲಿನಲ್ಲಿದೆ. ಅಲ್ಲಿ 15.4 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಇಂದೋರ್ ಜಿಲ್ಲೆಯಲ್ಲಿ ಹೆಚ್ಚು, ಅಂದರೆ 2.12 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ.

ರಾಜ್ಯದ 52 ಜಲ್ಲೆಗಳಲ್ಲಿ ಸುಮಾರು 7,000 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಲಸಿಕೆ ಕೇಂದ್ರಗಳನ್ನು ತಲುಪಲು ಸೂಕ್ತ ಸಾರಿಗೆ ವ್ಯವಸ್ಥೆ, ವೃದ್ಧರು ಮತ್ತು ಅಂಗವಿಕಲರ ಕಡೆಗೆ ವಿಶೇಷ ಗಮನ ಹರಿಸಲಾಗಿತ್ತು.

ಕರ್ನಾಟಕದಲ್ಲಿ ಸೋಮವಾರ 10.67 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 2.14 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ.

ಓದಿ: 

ಹೆಚ್ಚು ಜನಸಂಖ್ಯೆ ಇರುವ ಉತ್ತರ ಪ್ರದೇಶ 6.74 ಲಕ್ಷ ಡೋಸ್ ಲಸಿಕೆ ನೀಡಿ ಮೂರನೇ ಸ್ಥಾನದಲ್ಲಿದೆ. ರಾಜ್ಯದ ಲಸಿಕೆ ನೀಡಿಕೆ ವ್ಯಾಪ್ತಿಯು ಈವರೆಗೆ ಶೇಕಡಾವಾರು ಪ್ರಮಾಣದಲ್ಲಿ ಹಿಂದುಳಿದಿದೆ.

ಗುಜರಾತ್‌ನಲ್ಲಿ 5 ಸಾವಿರ ಲಸಿಕೆ ನೀಡಿಕೆ ಕೇಂದ್ರದ ಮೂಲಕ 5 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಅಂಕಿಅಂಶ ಪ್ರಕಾರ ಹರಿಯಾಣದಲ್ಲಿ 4.72 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಆದರೆ ರಾಜ್ಯ ಸರ್ಕಾರವು 6 ಲಕ್ಷ ಡೋಸ್ ನೀಡಲಾಗಿದೆ ಎಂದು ಹೇಳಿಕೊಂಡಿದೆ. ಗುರುಗ್ರಾಮದಲ್ಲಿ 1 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಅನಿಲ್ ವಿಜ್ ಅವರು ಹೇಳಿದ್ದಾರೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು