ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 2020ರಲ್ಲಿ ಭಾರತಕ್ಕೆ ಭೇಟಿ ನೀಡಿದ ವಿದೇಶಿಗರ ಸಂಖ್ಯೆ 30 ಲಕ್ಷ

Last Updated 2 ಫೆಬ್ರುವರಿ 2021, 10:42 IST
ಅಕ್ಷರ ಗಾತ್ರ

ನವದೆಹಲಿ: 2020ನೇ ವರ್ಷದಲ್ಲಿ 30 ಲಕ್ಷಕ್ಕೂ ಕಡಿಮೆ ವಿದೇಶಿ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಇದು ಶೇಕಡ 75 ರಷ್ಟು ಕಡಿಮೆಯಾಗಿದೆ. ಕೋವಿಡ್‌ನಿಂದಾಗಿ ಹೇರಲಾಗಿದ್ದ ಪ್ರಯಣ ನಿರ್ಬಂಧದಿಂದಾಗಿ ವಿದೇಶಿ ಪ್ರವಾಸಿಗರ ‍ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ, ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ.

‘2019ರಲ್ಲಿ 1.09 ಕೋಟಿ ಮತ್ತು 2018ರಲ್ಲಿ 1.05 ಕೋಟಿ ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಿದ್ದರು’ ಎಂದು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್‌ ಪಟೇಲ್‌ ಅವರು ಹೇಳಿದರು.

‘2017ರಲ್ಲೂ ವಿದೇಶಿ ಪ್ರವಾಸಿಗರ ಸಂಖ್ಯೆ 1 ಕೋಟಿ ದಾಟಿತ್ತು. ಆ ವರ್ಷ 1.04 ಕೋಟಿ ವಿದೇಶಿಗರು ಆಗಮಿಸಿದ್ದರು. ಆದರೆ 2020ರಲ್ಲಿ 26.8 ಲಕ್ಷ ಪ್ರವಾಸಿಗರು ಮಾತ್ರ ಭಾರತಕ್ಕೆ ಭೇಟಿ ನೀಡಿದ್ದಾರೆ’ ಎಂದು ಅವರು ಲಿಖಿತ ಉತ್ತರ ನೀಡಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT