ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸೋಂಕು: ದೇಶದಲ್ಲಿ 14,313 ಹೊಸ ಪ್ರಕರಣ ದೃಢ

Last Updated 30 ಅಕ್ಟೋಬರ್ 2021, 6:16 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 14,313 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 549 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರಿಂದ ದೇಶದಲ್ಲಿ ಒಟ್ಟಾರೆ ಸೋಂಕು ದೃಢಪಟ್ಟವರ ಸಂಖ್ಯೆ 3,42,60,470ಕ್ಕೆ ಏರಿದೆ. ಸದ್ಯ 1,61,55 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,57,740ಕ್ಕೆ ಏರಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

‌ದೇಶದಲ್ಲಿ ಈವರೆಗೆ 105.43 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT