ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 1 ಕೋಟಿ ಡೋಸ್ ಲಸಿಕೆ ಲಭ್ಯ

Last Updated 30 ಏಪ್ರಿಲ್ 2021, 11:02 IST
ಅಕ್ಷರ ಗಾತ್ರ

ನವದೆಹಲಿ: ‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ಕೋಟಿಕ್ಕಿಂತ ಹೆಚ್ಚುಲಸಿಕೆಯ ಡೋಸ್‌ಗಳು ಲಭ್ಯವಿದೆ. ಜತೆಗೆ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 20 ಲಕ್ಷಗಳಷ್ಟುಡೋಸ್‌ಗಳನ್ನು ರಾಜ್ಯಗಳಿಗೆ ನೀಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.

ಭಾರತ ಸರ್ಕಾರವು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಯ 16.33 ಕೋಟಿ (16,33,85,030) ಡೋಸ್‌ಗಳನ್ನು ಉಚಿತವಾಗಿ ನೀಡಿದೆ.

‘ಸದ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌ ಲಸಿಕೆಯ 1,00,28,527 ಡೋಸ್‌ಗಳು ಲಭ್ಯವಿದೆ. ಸುಮಾರು 20 ಲಕ್ಷ (19,81,110) ಡೋಸ್‌ಗಳನ್ನು ಮೂರು ದಿನಗಳೊಳಗೆ ಅವರಿಗೆ ನೀಡಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT