ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಲ್ಟಾ ರೂಪಾಂತರ ವಿರುದ್ಧವೂ ಕೊವ್ಯಾಕ್ಸಿನ್ ಪರಿಣಾಮಕಾರಿ: ಅಂತಿಮ ವರದಿ

ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್ ಸೋಂಕಿನ ವಿರುದ್ಧ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಕೊವ್ಯಾಕ್ಸಿನ್ ಲಸಿಕೆಯ ಅಂತಿಮ ವಿಶ್ಲೇಷಣೆಯನ್ನು ಭಾರತ್ ಬಯೋಟೆಕ್ ಕಂಪನಿ ಪೂರ್ಣಗೊಳಿಸಿದ್ದು, ಪರಿಣಾಮಕಾರಿತ್ವದ ವಿವರ ಬಿಡುಗಡೆ ಮಾಡಿದೆ.

ಮೂರನೇ ಹಂತದ ಕ್ಲಿನಿಕಲ್ ಟ್ರಯಲ್‌ನಲ್ಲಿ ಕೋವಿಡ್ ದೃಢಪಟ್ಟ 130 ಪ್ರಕರಣಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿತ್ತು. ಸೌಮ್ಯ ಹಾಗೂ ತೀವ್ರ ರೋಗಲಕ್ಷಣದ ಕೋವಿಡ್‌ ಪ್ರಕರಣಗಳನ್ನು ತಡೆಯುವಲ್ಲಿ ಲಸಿಕೆಯು ಶೇ 77.8ರಷ್ಟು ಪರಿಣಾಮಕಾರಿಯಾಗಿರುವುದು ಕಂಡುಬಂದಿದೆ ಎಂದು ಭಾರತ್ ಬಯೋಟೆಕ್ ತಿಳಿಸಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ತೀವ್ರವಾದ ರೋಗಲಕ್ಷಣ ತಡೆಯುವುದು ಮತ್ತು ಆಸ್ಪತ್ರೆಗೆ ದಾಖಲಾಗದಂತೆ ಮಾಡುವಲ್ಲಿ ಲಸಿಕೆಯು ಶೇ 93.4ರಷ್ಟು ಪರಿಣಾಮಕಾರಿತ್ವ ಹೊಂದಿದೆ. ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ಬಿ.1.617.2 ವಿರುದ್ಧ ಲಸಿಕೆಯ ಪರಿಣಾಮಕಾರಿತ್ವ ಶೇ 65.2ರಷ್ಟಿದೆ.

‘ಭಾರತ ಮತ್ತು ಅಮೆರಿಕದ ಕಂಪನಿಗಳ ಸಹಯೋಗದಲ್ಲಿ 2019ರಲ್ಲಿ ಆರಂಭಿಸಿದ್ದ ಸಂಶೋಧನೆಯು ಈಗ ಭಾರತದಲ್ಲಿ ಕೋವಿಡ್‌ ವಿರುದ್ಧ ಬಳಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯ ಪರಿಣಾಮದ ಪ್ರಮಾಣವನ್ನು ಹೆಚ್ಚಿಸಿದೆ’ ಎಂದುಅಮೆರಿಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ (ಎನ್‌ಐಎಚ್‌) ಇತ್ತೀಚೆಗೆ ಹೇಳಿತ್ತು. ಅಲ್ಲದೆ, ಕೊರೊನಾ ವೈರಸ್‌ನ ರೂಪಾಂತರ ತಳಿಗಳಾದ ಆಲ್ಫಾ ಮತ್ತು ಡೆಲ್ಟಾ ವಿರುದ್ಧವೂಕೊವ್ಯಾಕ್ಸಿನ್ರಕ್ಷಣೆ ನೀಡುತ್ತದೆ ಎಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT