ಶುಕ್ರವಾರ, ಸೆಪ್ಟೆಂಬರ್ 24, 2021
24 °C

ಕೋವಿಡ್ ಲಸಿಕಾ ಅಭಿಯಾನ: 2.29 ಕೋಟಿ ಡೋಸ್ ರಾಜ್ಯಗಳ ಬಳಿ ಇವೆ – ಕೇಂದ್ರ ಮಾಹಿತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯ, ಕೇಂದ್ರಾಡಳಿತ ಪ್ರದೇಶ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 2.29 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ಲಭ್ಯವಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 51.66 ಕೋಟಿ ಡೋಸ್‌ಗಳನ್ನು ಹಂಚಿಕೆ ಮಾಡಲಾಗಿದೆ. 55,52,070 ಡೋಸ್‌ಗಳು ಪೂರೈಕೆ ಹಂತದಲ್ಲಿವೆ ಎಂದು ಸಚಿವಾಲಯ ತಿಳಿಸಿದೆ.

ಈವರೆಗೆ 49,74,90,815 ಡೋಸ್‌ ಲಸಿಕೆ ಬಳಕೆಯಾಗಿವೆ (ವ್ಯರ್ಥವಾಗಿರುವುದೂ ಸೇರಿ). ಲಸಿಕೆ ನೀಡಿಕೆ ಅಭಿಯಾನವನ್ನು ಇನ್ನಷ್ಟು ತ್ವರಿತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದೂ ಸಚಿವಾಲಯ ಹೇಳಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು