ಶನಿವಾರ, ನವೆಂಬರ್ 28, 2020
18 °C

ಕೊವಾಕ್ಸಿನ್ ಮೂರನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡಲು ಶಿಫಾರಸು

ಪಿಟಿಐ Updated:

ಅಕ್ಷರ ಗಾತ್ರ : | |

Covid 19 vaccine covaxin

ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಕೋವಿಡ್–19 ಲಸಿಕೆ ಕೊವಾಕ್ಸಿನ್‌ನ ಮೂರನೇ ಹಂತದ ಪ್ರಯೋಗಕ್ಕೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್‌ನ (ಸಿಡಿಎಸ್‌ಸಿಒ) ತಜ್ಞರ ತಂಡ ಶಿಫಾರಸು ಮಾಡಿದೆ.

ಲಸಿಕೆಯ ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಲ್ಲಿನ ಸುರಕ್ಷತೆ ಮತ್ತು ಪ್ರತಿರೋಧ ಸಾಮರ್ಥ್ಯಕ್ಕೆ ಸಂಬಂಧಿಸಿದ ದತ್ತಾಂಶಗಳ ಪರಿಶೀಲನೆ ನಡೆಸಿದ ಬಳಿಕ ಶಿಫಾರಸು ಮಾಡಲಾಗಿದೆ. ಅಂತಿಮ ಅನುಮೋದನೆಗಾಗಿ ಡಿಸಿಜಿಐಗೆ (ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ) ಕಳುಹಿಸಿಕೊಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

‘ಇಂದು ರಾತ್ರಿ ಅಥವಾ ಶನಿವಾರ ಬೆಳಿಗ್ಗೆ ಡಿಸಿಜಿಐ ಅನುಮತಿ ನೀಡುವ ನಿರೀಕ್ಷೆ ಇದೆ’ ಎಂದೂ ಮೂಲಗಳು ಹೇಳಿವೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡುವಂತೆ ಕಂಪನಿಯು ಅಕ್ಟೋಬರ್ 2ರಂದು ಡಿಸಿಜಿಐಗೆ ಮನವಿ ಮಾಡಿತ್ತು. ಆದರೆ, ಸುರಕ್ಷತೆ ಮತ್ತು ಪ್ರತಿರೋಧ ಸಾಮರ್ಥ್ಯಕ್ಕೆ ಸಂಬಂಧಿಸಿದ ಸಂಪೂರ್ಣ ದತ್ತಾಂಶವನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: 

18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ 28,500 ಮಂದಿಯನ್ನು ಪ್ರಯೋಗಕ್ಕೆ ಒಳಪಡಿಸುವುದಾಗಿಯೂ ದೆಹಲಿ, ಮುಂಬೈ, ಪಟ್ನಾ, ಲಖನೌ ಸೇರಿ 19 ಕಡೆಗಳಲ್ಲಿ ನಡೆಸುವುದಾಗಿಯೂ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು