ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ 36.89 ಕೋಟಿ ಮಂದಿಗೆ ಕೋವಿಡ್‌ ಲಸಿಕೆ

Last Updated 9 ಜುಲೈ 2021, 9:08 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಇಲ್ಲಿಯವರೆಗೆ 36.89 ಕೋಟಿ ಮಂದಿಗೆ ಕೋವಿಡ್‌–19 ಲಸಿಕೆ ನೀಡಲಾಗಿದ್ದು, ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 40 ಲಕ್ಷ ಡೋಸ್‌ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಲಸಿಕೆ ಪಡೆದ 36.89 ಕೋಟಿ ಮಂದಿಯಲ್ಲಿ, 11.18 ಕೋಟಿಗೂ ಹೆಚ್ಚು ಮಂದಿ 18 ರಿಂದ 44 ವರ್ಷದೊಳಗಿನವರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಜುಲೈ 8ರಂದು 40,23,173 ಡೋಸ್‌ಗಳಷ್ಟು ಲಸಿಕೆ ನೀಡಲಾಗಿದೆ. ಅದರಲ್ಲಿ 27,01,200 ಫಲಾನುಭವಿಗಳು ಮೊದಲ ಡೋಸ್‌ ಮತ್ತು 13,21,973 ಮಂದಿ ಎರಡನೇ ಡೋಸ್‌ ಲಸಿಕೆಯನ್ನು ಪಡೆದಿದ್ದಾರೆ.

ಇದರಲ್ಲಿ 18 ರಿಂದ 44 ವರ್ಷದೊಳಗಿನ 10.84 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ಅವರಲ್ಲಿ 20,13,634 ಮಂದಿ ಮೊದಲ ಡೋಸ್‌ ಹಾಗೂ 1,79,901 ಫಲಾನುಭವಿಗಳು ಎರಡನೇ ಡೋಸ್‌ ಲಸಿಕೆ ಪಡೆದಿದ್ದಾರೆ.

ದೇಶದ ಎಂಟು ರಾಜ್ಯಗಳಲ್ಲಿ (ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್,ಕರ್ನಾಟಕ ಮತ್ತು ಮಹಾರಾಷ್ಟ್ರ) 18 ರಿಂದ 44 ವರ್ಷದೊಳಗಿನ 50 ಲಕ್ಷಕ್ಕೂ ಹೆಚ್ಚು ಮಂದಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT