ಬುಧವಾರ, ಮೇ 19, 2021
27 °C

‘ಸ್ಪುಟ್ನಿಕ್‌’ ಲಸಿಕೆಗೆ ದೇಶದಲ್ಲಿ 10 ದಿನದಲ್ಲಿ ಅನುಮೋದನೆ ಸಾಧ್ಯತೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಷ್ಯಾ ಅಭಿವೃದ್ಧಿಪಡಿಸಿರುವ ಕೋವಿಡ್‌ ಲಸಿಕೆ ‘ಸ್ಪುಟ್ನಿಕ್‌ ವಿ’ಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಕೇಂದ್ರ ಸರ್ಕಾರ 10 ದಿನಗಳಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಈ ಲಸಿಕೆಗೆ ಅನುಮೋದನೆ ನೀಡುವ ಸಂಬಂಧ ಕೇಂದ್ರೀಯ ಔಷಧ ಪ್ರಮಾಣೀಕರಣ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಮತ್ತಷ್ಟೂ ವಿವರಗಳನ್ನು ಸಲ್ಲಿಸುವಂತೆ ಲಸಿಕೆ ಅಭಿವೃದ್ಧಿಪಡಿಸಿರುವ ಕಂಪನಿಗೆ ಸೂಚಿಸಿದೆ.

ಭಾರತದಲ್ಲಿ ಈ ಲಸಿಕೆಯ ಕ್ಲಿನಿಕಲ್‌ ಟ್ರಯಲ್‌ಅನ್ನು ಡಾ.ರೆಡ್ಡೀಸ್‌ ಲ್ಯಾಬೋರೇಟರೀಸ್‌ ನಡೆಸಿದೆ. ಹೀಗಾಗಿ ಕ್ಲಿನಿಕಲ್‌ ಟ್ರಯಲ್‌ನ ಮಾಹಿತಿ ನೀಡುವಂತೆ ಸಿಡಿಎಸ್‌ಸಿಒ ಈ ಕಂಪನಿಗೂ ಸೂಚಿಸಿದೆ.

ಒಂದೆಡೆ ಕೋವಿಡ್‌ ಪ್ರಕರಣಗಳಲ್ಲಿ ಹೆಚ್ಚಳ, ಮತ್ತೊಂದೆಡೆ ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ ಕಳವಳಕ್ಕೆ ಕಾರಣವಾಗಿದೆ. ಹೀಗಾಗಿ ಸ್ಪುಟ್ನಿಕ್‌ ಲಸಿಕೆ ಬಳಕೆಗೆ ಅನುಮೋದನೆ ನೀಡುವುದಕ್ಕೆ ಮಹತ್ವ ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು