ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ನೀಡದಿದ್ದರೆ ದೆಹಲಿ ಸರ್ಕಾರದಿಂದಲೇ ಉಚಿತ ಕೋವಿಡ್-19 ಲಸಿಕೆ: ಕೇಜ್ರಿವಾಲ್

Last Updated 13 ಜನವರಿ 2021, 10:56 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಮಾತು ಮುಂದುವರಿಸಿರುವ ಅವರು, ಕೇಂದ್ರ ಸರ್ಕಾರವುಅದನ್ನು ಮಾಡದಿದ್ದಲ್ಲಿ ದೆಹಲಿ ಸರ್ಕಾರವೇ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ನೀಡಲಿದೆ ಎಂದವರು ತಿಳಿಸಿದರು.

ಕೋವಿಡ್-19 ಲಸಿಕೆ ಬಗ್ಗೆ ತಪ್ಪು ಮಾಹಿತಿ ಹರಡದಂತೆ ನಾನು ಎಲ್ಲರಿಗೂ ವಿನಂತಿಸುತ್ತೇನೆ. ಕೋವಿಡ್-19 ಲಸಿಕೆ ಉಚಿತವಾಗಿ ನೀಡಬೇಕೆಂದು ನಾನು ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದೇನೆ. ಕೇಂದ್ರವು ಅದನ್ನು ಮಾಡದಿದ್ದಲ್ಲಿ ದೆಹಲಿ ಜನರಿಗೆ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.

ಕೋವಿಡ್-19 ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡಿರುವ ಸೇನಾನಿ ಡಾ. ಹೀತೇಶ್ ಗುಪ್ತಾ ಮನೆಗೆ ಭೇಟಿ ನೀಡಿದ ಕೇಜ್ರಿವಾಲ್ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಕೊರೊನಾ ಸೇನಾನಿಗಳನ್ನು ಪ್ರೋತ್ಸಾಹಿಸುವ ಯೋಜನೆಯನ್ನು ನಾವು ಪ್ರಾರಂಭಿಸಿದ್ದೇವೆ. ಅದರಡಿಯಲ್ಲಿ ಕುಟುಂಬಕ್ಕೆ 1 ಕೋಟಿ ರೂ.ಗಳ ಸಹಾಯವನ್ನು ನೀಡಲಾಗುವುದು. ಡಾ. ಹೀತೇಶ್ ಗುಪ್ತಾ ಪತ್ನಿ ಶಿಕ್ಷಿತರಾಗಿದ್ದು, ಶೀಘ್ರದಲ್ಲೇ ದೆಹಲಿ ಸರ್ಕಾರದಲ್ಲಿ ಉದ್ಯೋಗ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT