ಸೋಮವಾರ, ಮಾರ್ಚ್ 8, 2021
27 °C
ಮೊದಲ ಹತ್ತು ಲಕ್ಷ ಜನರಿಗೆ ಲಸಿಕೆ: ಬ್ರಿಟನ್, ಅಮೆರಿಕಕ್ಕಿಂತಲೂ ಭಾರತ ಮುಂದೆ

30 ಕೋಟಿ ಭಾರತೀಯರಿಗೆ ಕೋವಿಡ್ ಲಸಿಕೆಗೆ ಬೇಕು ಮೂರು ವರ್ಷ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಅಮೆರಿಕ ಮತ್ತು ಬ್ರಿಟನ್‌ಗಿಂತಲೂ ಅತ್ಯಂತ ವೇಗವಾಗಿ ಭಾರತವು ದೇಶದ ಮೊದಲ 10 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಿದೆ. ಆದರೆ, ಇದೇ ವೇಗದಲ್ಲಿ ಆದ್ಯತೆಯಲ್ಲಿ 30 ಕೋಟಿ ಜನರಿಗೆ ಲಸಿಕೆ ನೀಡಲು ಮೂರು ವರ್ಷಗಳು ಬೇಕು ಎಂದು ತಜ್ಞರು ಅಂದಾಜಿಸಿದ್ದಾರೆ.

ಭಾರತವು ಪ್ರಸ್ತುತ ದಿನಕ್ಕೆ 3 ಲಕ್ಷ ಜನರಿಗೆ ಲಸಿಕೆ ಹಾಕುವ ಸಾಮರ್ಥ್ಯ ಹೊಂದಿದೆ. ಲಸಿಕಾ ಕಾರ್ಯಕ್ರಮದ ಮೊದಲ ವಾರದ ಸಂಖ್ಯೆಗಳ ಪ್ರಕಾರ, ಪ್ರಸ್ತುತ ಲಸಿಕಾ ಸಾಮರ್ಥ್ಯ ದರವು ಶೇಕಡ 58 ಆಗಿದೆ. ಆದರೆ, ಮುಂಬರುವ ದಿನಗಳಲ್ಲಿ ಇದು ಸುಧಾರಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಲಸಿಕಾ ಸಾಮರ್ಥ್ಯ ದರವು ದಿನಕ್ಕೆ ಶೇಕಡ 67 ಆದರೆ, ಕೆಲವೇ ತಿಂಗಳುಗಳಲ್ಲಿ 30 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ಲಭಿಸಲಿದೆ. ಇದಕ್ಕಾಗಿ ನಾವು ಹೆಚ್ಚಿನ ಸಾಮರ್ಥ್ಯ ತೋರಬೇಕಿದೆ ಎಂದು ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ  ನಿರ್ದೇಶಕ, ವೈರಲಾಜಿಸ್ಟ್ ಶಾಹಿದ್ ಜಮೀಲ್ ಹೇಳಿದ್ದಾರೆ.

ಲಸಿಕೆಯ ಎರಡನೇ ಹಂತದ ಕಾರ್ಯಕ್ರಮದಲ್ಲಿ 20 ಲಕ್ಷ ಮುಂಚೂಣಿ ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ನೀಡಬೇಕು. ಇದು ಏಪ್ರಿಲ್ ಅಥವಾ ಮೇ ವೇಳೆಗೆ ಆಗುವ ಸಾಧ್ಯತೆ ಇದೆ. ಪ್ರಸ್ತುತ ದಿನಕ್ಕೆ 3 ಲಕ್ಷ  ಜನರಿಗೆ ಲಸಿಕೆ ನೀಡಿದರೂ ಒಟ್ಟಾರೆ 30 ಕೋಟಿ ಜನರಿಗೆ ಲಸಿಕೆ ನೀಡಲು 36 ತಿಂಗಳು ಅಂದರೆ ಮೂರು ವರ್ಷಗಳು ಬೇಕಾಗುತ್ತದೆ ಎಂದು ತಜ್ಞರು ಅಂದಾಜಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು