ನವದೆಹಲಿ: ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ–ಪಿಸಿಆರ್ಪರೀಕ್ಷೆ ಮಾಡಿಸಿರುವುದು ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಹೇಳಿದ್ದಾರೆ.
‘ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್‌ಕಾಂಗ್, ಥೈಲ್ಯಾಂಡ್ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ’ ಎಂದು ಮಾಂಡವಿಯಾ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಣ್ಗಾವಲು ಹೆಚ್ಚಿಸಲು ಹಾಗೂ ಲಸಿಕೀಕರಣಕ್ಕೆ ಒತ್ತು ನೀಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಸೇರಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಜ್ಞರು ನಾಗರಿಕರಿಗೆ ಸಲಹೆ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.