ಬುಧವಾರ, ಮೇ 12, 2021
19 °C
ಗುಜರಾತ್ ಸರ್ಕಾರದ ಮನವಿ ಮೇರೆಗೆ ಕೇಂದ್ರ ಗೃಹ ಸಚಿವಾಲಯದ ನಿರ್ಧಾರ

ಗುಜರಾತ್ ಕೋವಿಡ್ ಆಸ್ಪತ್ರೆಗೆ, ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ನಿಯೋಜನೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗುಜರಾತ್‌ ರಾಜಧಾನಿ ಅಹಮದಾಬಾದ್‌ನಲ್ಲಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ನಿರ್ಮಾಣ ಮಾಡುತ್ತಿರುವ 900 ಹಾಸಿಗೆಗಳ ಸಾಮರ್ಥ್ಯದ ಕೋವಿಡ್‌ ಆಸ್ಪತ್ರೆಗಾಗಿ ಅರೆ ಸೇನಾಪಡೆ ವಿಭಾಗದಿಂದ 25 ವೈದ್ಯರು ಮತ್ತು 75 ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

‘ಗುಜರಾತ್ ಸರ್ಕಾರದ ಮನವಿ ಮೇರೆಗೆ ಕೇಂದ್ರ ಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ‘ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದಲ್ಲಿ ಕೋವಿಡ್‌ ಎರಡನೇ ಅಲೆಯ ಹೆಚ್ಚು ಪ್ರಕರಣಗಳು ದಾಖಲಾಗಿರುವ ರಾಜ್ಯಗಳಲ್ಲಿ ಗುಜರಾತ್‌ ಕೂಡ ಸೇರಿದೆ. ಶುಕ್ರವಾರದವರೆಗಿನ ಮಾಹಿತಿ ಪ್ರಕಾರ ಗುಜರಾತ್‌ನಲ್ಲಿ 8920 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. 94 ಮಂದಿ ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಅಂಕಿ ಸಂಖ್ಯೆಗಳ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 3,64,688ಕ್ಕೆ ಏರಿದ್ದರೆ, ಕೋವಿಡ್‌ನಿಂದ ಸತ್ತವರ ಸಂಖ್ಯೆ 5,170ಕ್ಕೆ ಏರಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು